ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಸಿಂಹ ದಿನ: ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

Last Updated 10 ಆಗಸ್ಟ್ 2021, 4:54 IST
ಅಕ್ಷರ ಗಾತ್ರ

ನವದೆಹಲಿ: ವಿಶ್ವ ಸಿಂಹ ದಿನದಂದು ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿನ ಸಿಂಹಗಳ ಸಂಖ್ಯೆಯು ನಿರಂತರ ಏರಿಕೆ ಕಂಡಿದೆ ಎಂದು ಮಂಗಳವಾರ ಹೇಳಿದ್ದಾರೆ.

'ಸಿಂಹವು ಗಂಭೀರ ಮತ್ತು ಧೈರ್ಯಶಾಲಿ ಪ್ರಾಣಿಯಾಗಿದೆ ಮತ್ತು ಏಷ್ಯಾಟಿಕ್ ಸಿಂಹಗಳಿಗೆ ತವರೂರೆಂಬ ಹೆಮ್ಮೆ ಭಾರತಕ್ಕಿದೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

'ವಿಶ್ವ ಸಿಂಹ ದಿನದಂದು, ಸಿಂಹ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿನ ಸಿಂಹಗಳ ಸಂಖ್ಯೆಯಲ್ಲಿ ಸ್ಥಿರವಾದ ಹೆಚ್ಚಳ ಕಂಡುಬಂದಿದೆ ಎಂಬುದನ್ನು ಕೇಳಲು ಸಂತವಾಗುತ್ತದೆ' ಎಂದು ಅವರು ಹೇಳಿದ್ದಾರೆ.

'ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ, ಗಿರ್ ಸಿಂಹಗಳಿಗೆ ಸುರಕ್ಷಿತ ಮತ್ತು ನಿರ್ಭೀತ ಆವಾಸಸ್ಥಾನಗಳನ್ನು ಖಾತ್ರಿಪಡಿಸುವತ್ತ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿತ್ತು' ಎಂದಿರುವ ಅವರು, 'ಸಿಂಹಗಳ ಆವಾಸಸ್ಥಾನಗಳು ಸುರಕ್ಷಿತವಾಗಿದೆಯೇ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗುತ್ತದೆಯೇ' ಎಂಬುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಸಮುದಾಯಗಳ ಮಟ್ಟದಲ್ಲಿ ಮತ್ತು ಜಾಗತಿಕವಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT