ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ: ವಿಶ್ವದ ಎತ್ತರದ ರೈಲ್ವೆ ಸೇತುವೆಯ ತಳಭಾಗದ ಕಾಮಗಾರಿ ಪೂರ್ಣ -ಸಚಿವ ಗೋಯಲ್

Last Updated 16 ಮಾರ್ಚ್ 2021, 9:57 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಇರುವ ಚೆನಾಬ್ ನದಿ ಮೇಲೆ ನಿರ್ಮಿಸಲಾಗುತ್ತಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ತಳ ಭಾಗದ ಕಾಮಗಾರಿ ಪೂರ್ಣಗೊಂಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್‌ ಟ್ವೀಟ್‌ ಮಾಡಿದ್ದಾರೆ.

ರೈಲ್ವೆ ಸೇತುವೆಯ ತಳಭಾಗದ ಕಾಮಗಾರಿ ಪೂರ್ಣಗೊಂಡಿದೆ. ಇನ್ನು ಸೇತುವೆಯ ಎಂಜಿನಿಯರಿಂಗ್‌ ಹಾಗೂ ಹಳಿ ಜೋಡಣೆ ಕಾರ್ಯ ಮಾತ್ರ ಬಾಕಿ ಉಳಿದಿದೆ. ಈ ವರ್ಷದ ಅಂತ್ಯಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದಿನ ವರ್ಷ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಜಮ್ಮು ಕಾಶ್ಮೀರದ ರೆಯಾಸಿ ಜಿಲ್ಲೆಯಲ್ಲಿ ಈ ಕಾಮಗಾರಿ ನಡೆಯುತ್ತಿದ್ದು, ಕಾಶ್ಮೀರ ಕಣಿವೆಗೆ ಮೊದಲ ಬಾರಿಗೆ ನೇರ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಈ ಮೂಲಕ ರೈಲ್ವೆ ಸಂಪರ್ಕ ಜಾಲ ಮತ್ತಷ್ಟು ವಿಸ್ತರಣೆಯಾಗಲಿದ್ದು, 2022 ಡಿಸೆಂಬರ್‌ ಒಳಗಾಗಿ ಈ ಮಾರ್ಗದಲ್ಲಿ ರೈಲು ಸೇವೆ ಆರಂಭಗೊಳ್ಳಲಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸೇತುವೆಯು ನೆಲಮಟ್ಟದಿಂದ 359 ಮೀಟರ್ ಎತ್ತರವಿದ್ದು, ವಿಶ್ವವಿಖ್ಯಾತ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರ ಇದೆ. ಗಂಟೆಗೆ 266 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯ ಈ ಸೇತುವೆಗಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2015ರಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ಪ್ರಮುಖ ಯೋಜನೆಗಳ ಅನುಷ್ಠಾನಕ್ಕೆ ಪ್ರಧಾನ ಮಂತ್ರಿ ಅಭಿವೃದ್ಧಿ ಪ್ಯಾಕೆಜ್‌ನಡಿ ₹80,068 ಕೋಟಿ ಬಿಡುಗಡೆ ಮಾಡಲಾಗಿತ್ತು. ಇದೇ ಹಣದಲ್ಲಿ ಈ ರೈಲ್ವೆ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT