ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರಾಸ್ತ್ರಗಳೊಂದಿಗೆ ವಿಹಾರ ನೌಕೆ: ಶಸ್ತ್ರಾಸ್ತ ಕಾಯ್ದೆಯಡಿ ಎಫ್‌ಐಆರ್ ದಾಖಲು

Last Updated 19 ಆಗಸ್ಟ್ 2022, 15:16 IST
ಅಕ್ಷರ ಗಾತ್ರ

ಮುಂಬೈ:ಇಲ್ಲಿಗೆ ಸಮೀಪದ ರಾಯಗಢ ಕರಾವಳಿ ಪ್ರದೇಶದಲ್ಲಿ 16 ಮೀಟರ್‌ ಉದ್ದದ ವಿಹಾರ ನೌಕೆಯಲ್ಲಿ ಶಸ್ತ್ರಾಸ್ತಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್‌) ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಶಸ್ತ್ರಾಸ್ತ ಕಾಯ್ದೆಯ ಸೆಕ್ಷನ್ 7 ಮತ್ತು 25ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಎಟಿಎಸ್‌ನ ನವಿ ಮುಂಬೈ ಘಟಕವು ಪ್ರಕರಣದ ತನಿಖೆ ಕೈಗೊಂಡಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ದಹಿ ಹಂಡಿ (ಶ್ರೀಕೃಷ್ಣ ಜನ್ಮಾಷ್ಟಮಿ) ಮತ್ತು ಗಣೇಶ ಹಬ್ಬಗಳ ಸಂದರ್ಭದಲ್ಲಿ ಶಸ್ತ್ರಾಸ್ತಗಳಿದ್ದ ವಿಹಾರ ನೌಕೆ ಪತ್ತೆಯಾಗಿದ್ದು ಆತಂಕ ಮೂಡಿಸಿತ್ತು. ‘ಈ ಪ್ರಕರಣದಲ್ಲಿ ಭಯೋತ್ಪಾದಕರ ನಂಟಿರುವುದು ಪತ್ತೆಯಾಗಿಲ್ಲ’ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT