ಗುರುವಾರ , ಡಿಸೆಂಬರ್ 1, 2022
20 °C

ಭಾರಿ ಮಳೆ; ಉಕ್ಕಿ ಹರಿಯುತ್ತಿರುವ ಯಮುನಾ ನದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ಯಮುನಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿ ಉಕ್ಕಿ ಹರಿಯುತ್ತಿದೆ. ಮುಂದಿನ ಎರಡು ದಿನಗಳಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ನದಿ ತೀರದಲ್ಲಿ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಅಪಾಯ ಮಟ್ಟವು 205.3 ಮೀಟರ್‌ ಆಗಿದ್ದು, ನೀರು ಆ ಮಟ್ಟ ತಲುಪುತ್ತಿದ್ದಂತೆ ಪ್ರವಾಹ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ ಎಂದು ಪಶ್ಚಿಮ ದೆಹಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅನಿಲ್‌ ಬಂಕಾ ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು