ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2023ರ ಒಳಗೆ ‘ಯಮುನಾ‘ ನದಿ ಪೂರ್ತಿ ಶುದ್ಧ: ದೆಹಲಿ ಸಚಿವ ಸತ್ಯೇಂದರ್ ಜೈನ್

ಇದೇ ವೇಳೆ ನದಿಯಲ್ಲಿ ಮೀನಿನ ಸಂತಾನೋತ್ಪತ್ತಿಗೂ ಉತ್ತೇಜನ
Last Updated 22 ಮಾರ್ಚ್ 2022, 10:41 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ವ್ಯಾಪ್ತಿಯಲ್ಲಿ ಹರಿಯುವ ಯಮುನಾ ನದಿಯನ್ನು ಪೂರ್ತಿಯಾಗಿ ಶುದ್ಧೀಕರಿಸಲಾಗುತ್ತದೆ. ಶೀಘ್ರವೇ ಈ ನದಿ ನೀರು ಸ್ನಾನ ಮಾಡಲು ಯೋಗ್ಯವಾಗುವಂತೆ ಮಾಡಲಾಗುತ್ತದೆ. ಜೊತೆಗೆ 2023ರ ಡಿಸೆಂಬರ್ ಅಂತ್ಯದೊಳಗೆ ಮೀನಿನ ಸಂತಾನೋತ್ಪತ್ತಿಯನ್ನು ಆರಂಭಿಸಲಾಗುತ್ತದೆ ಎಂದು ದೆಹಲಿ ಜಲ ಸಂಪನ್ಮೂಲ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ಮಂಗಳವಾರ ಅಸೋಚಾಮ್ ಏರ್ಪಡಿಸಿದ್ದ ಆನ್‌ಲೈನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, 'ದೆಹಲಿಯಲ್ಲಿ 15 ತಿಂಗಳಲ್ಲಿ ಎಲ್ಲಾ ಪ್ರದೇಶಗಳನ್ನು ಚರಂಡಿಗೆ ಸಂಪರ್ಕ ವ್ಯವಸ್ಥೆಯಡಿ ತರಲಾಗುತ್ತದೆ. 2025ರ ಬದಲಿಗೆ 2023ರ ಡಿಸೆಂಬರ್ ಅಂತ್ಯದೊಳಗೆ ಯಮುನೆಯನ್ನು ಶುದ್ಧೀಕರಿಸುತ್ತೇವೆ. ಎಲ್ಲಾ ಚರಂಡಿಗಳನ್ನು ಪೂರ್ತಿಯಾಗಿ ಶುದ್ಧ ಮಾಡುತ್ತೇವೆ' ಎಂದು ಹೇಳಿದರು.

ಜೊತೆಗೆ ಮುಂದಿನ 5-10 ವರ್ಷಗಳಲ್ಲಿ ದೆಹಲಿಯ ಅಂತರ್ಜಲವನ್ನು 50 ವರ್ಷಗಳ ಹಿಂದಿನ ಮಟ್ಟಕ್ಕೆ ಎತ್ತರಿಸಲಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT