ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈ ಹಳ್ಳಿಯಲ್ಲಿ 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆಗೆ ನಿಷೇಧ!

Last Updated 17 ನವೆಂಬರ್ 2022, 7:15 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಪಶ್ಚಿಮ ವಿದರ್ಭ ಪ್ರದೇಶದ ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ 18 ವರ್ಷ ವಯಸ್ಸಿನ ಒಳಗಿನವರು ಮೊಬೈಲ್ ಬಳಕೆಗೆ ನಿಷೇಧ ಹೇರಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಪುಸಾದ್ ತಹಸಿಲ್ ವ್ಯಾಪ್ತಿಯ ಬನ್ಸಿ ಗ್ರಾಮ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಮಕ್ಕಳು ಗೇಮ್ಸ್ ಆಡವುದು ಮತ್ತು ಅವರ ವೀಕ್ಷಣೆಗೆ ಯೋಗ್ಯವಲ್ಲದ ವೆಬ್‌ಸೈಟ್‌ಗಳನ್ನು ಸರ್ಫಿಂಗ್ ಮಾಡುವ ವ್ಯಸನಿಗಳಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಎಲ್ಲ ಪೋಷಕರಿಗೆ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಬನ್ಸಿ ಗ್ರಾಮ ಪಂಚಾಯಿತಿಯ ಸರಪಂಚ್ ಗಜಾನನ ತಾಳೆ ಹೇಳಿದ್ದಾರೆ, .

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮೊಬೈಲ್ ಬಳಕೆಗೆ ನಿಷೇಧ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

‘ಈ ನಿರ್ಣಯದ ಅನುಷ್ಠಾನದಲ್ಲಿ ತೊಡಕುಗಳು ಎದುರಾಗುತ್ತವೆ ಎಂಬುದು ನಮಗೆ ತಿಳಿದಿದೆ. ಆದರೆ, ನಾವು ಕೌನ್ಸೆಲಿಂಗ್ ಮೂಲಕ ಈ ಸಮಸ್ಯೆಗಳನ್ನು ನಿವಾರಿಸುತ್ತೇವೆ. ನಿಯಮದ ಉಲ್ಲಂಘನೆಗಾಗಿ ದಂಡ ವಿಧಿಸಬೇಕಾಗಬಹುದು. ಆದರೆ, ಗ್ರಾಮಸ್ಥರು ಈ ನಿರ್ಧಾರವನ್ನು ಒಮ್ಮತದಿಂದ ಬೆಂಬಲಿಸಿದ್ದಾರೆ’ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT