ಶನಿವಾರ, ಸೆಪ್ಟೆಂಬರ್ 25, 2021
29 °C

ಯಡಿಯೂರಪ್ಪ ಉತ್ತಮ ಕೆಲಸ ಮಾಡಿದ್ದಾರೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ‘ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡಿದ್ದಾರೆ’ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಇದೆ ಎಂಬುದನ್ನು ತಳ್ಳಿಹಾಕಿದ್ದಾರೆ.

‘ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಡಿಯೂರಪ್ಪ ಅವರು ತಮ್ಮದೇ ಆದ ರೀತಿಯಲ್ಲಿ ವಿಷಯಗಳನ್ನು ನೋಡಿಕೊಳ್ಳುತ್ತಿದ್ದಾರೆ’ ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಕರ್ನಾಟಕದಲ್ಲಿನ ನಾಯಕತ್ವ ಬಿಕ್ಕಟ್ಟಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಸಿದ ಅವರು, ‘ಹಾಗೆಂದು ನಿಮಗೆ ಅನಿಸುತ್ತಿದೆ. ಆದರೆ ನಮಗೆ ಹಾಗೆ ಅನಿಸುತ್ತಿಲ್ಲ’ ಎಂದರು.

‘ಹೈಕಮಾಂಡ್‌ನ ಸೂಚನೆ ಬಂದ ಕೂಡಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ’ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದರು. ಇದಾದ ಕೆಲ ಗಂಟೆಗಳಲ್ಲಿಯೇ ನಡ್ಡಾ ಅವರು ಪ್ರತಿಕ್ರಿಯಿಸಿರುವುದು ಮಹತ್ವ ಪಡೆದುಕೊಂಡಿದೆ.

ಇವುಗಳನ್ನೂ ಓದಿ...

ಹೈಕಮಾಂಡ್‌ನಿಂದ ಇನ್ನೂ ಸಂದೇಶ ಬಂದಿಲ್ಲ: ಬಿಎಸ್‌ವೈ

ದೆಹಲಿಯಲ್ಲಿ ಬೀಡು ಬಿಟ್ಟ ಮುರುಗೇಶ ನಿರಾಣಿ; ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ ​

ಸಿಕ್ಕಿತೇ ಹೈಕಮಾಂಡ್ ಸಂದೇಶ..? ಕಾದು ನೋಡೋಣ ಎಂದ ಸಿಎಂ ಬಿಎಸ್‌ವೈ ​

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು