ಶುಕ್ರವಾರ, ಏಪ್ರಿಲ್ 16, 2021
27 °C

ಯೆಸ್‌ ಬ್ಯಾಂಕ್‌ ಹಣ ಅಕ್ರಮ ವರ್ಗಾವಣೆ ಪ್ರಕರಣ: ಆರೋಪ ಪಟ್ಟಿ ದಾಖಲಿಸಿದ ಇ.ಡಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ) ಮುಂಬೈ ಮೂಲದ ರಿಯಲ್‌ ಎಸ್ಟೇಟ್‌ ಸಮೂಹ ಓಂಕಾರ್‌ ರಿಯಲ್ಟರ್ಸ್ ಸಂಸ್ಥೆಯ ವಿರುದ್ಧ ಆರೋಪಪಟ್ಟಿ ದಾಖಲಿಸಿದೆ. ಯೆಸ್‌ ಬ್ಯಾಂಕ್‌ನಿಂದ ಪಡೆದಿದ್ದ ₹ 400 ಕೋಟಿ ಸಾಲದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದ್ದ ಆರೋಪದಡಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.

ಈ ಕುರಿತ ಹೇಳಿಕೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಯು, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಆರೋಪಪಟ್ಟಿಯನ್ನು ಮುಂಬೈನ ವಿಶೇಷ ಕೋರ್ಟ್‌ನಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದೆ.

ಓಂಕಾರ್ ರಿಯಲ್ಟರ್ಸ್ ಅಧ್ಯಕ್ಷ  ಕಮಲ್‌ ಕಿಶೋರ್ ಗುಪ್ತಾ, ವ್ಯವಸ್ಥಾಪಕ ನಿರ್ದೇಶಕ ಬಾಬುಲಾಲ್‌ ವರ್ಮಾ, ನಟ–ನಿರ್ಮಾಪಕ ಮತ್ತು ವಿಕಿಂಗ್‌ ಗ್ರೂಪ್‌ನ ಪ್ರವರ್ತಕ ಸಚಿನ್‌ ಜೋಷಿ ಮತ್ತು ಅವರ ಕಂಪನಿಗಳನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ.

ಈ ಹಿಂದೆ ಪ್ರಕರಣದ ಸಂಬಂಧ ಕಂಪನಿಗಳ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು, ಈ ಮೂವರನ್ನು ಬಂಧಿಸಿದ್ದರು. ಯೆಸ್ ಬ್ಯಾಂಕ್‌ನಿಂದ ಪಡೆದಿದ್ದ ₹ 400 ಕೋಟಿ ಸಾಲವನ್ನು ಅನ್ಯ ಉದ್ದೇಶಕ್ಕೆ ಬಳಸಿದ, ಮರುಪಾವತಿಸದೇ ವಂಚಿಸಿದ ಸಂಬಂಧ ದಾಖಲಾಗಿದ್ದ ಔರಂಗಾಬಾದ್‌ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು