ಗುರುವಾರ , ಮಾರ್ಚ್ 30, 2023
32 °C

ಬಿಹಾರ: ನಕಲಿ ಮದ್ಯ ಸೇವನೆ– ಇಬ್ಬರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಜಾಫರ್‌ಪುರ: ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ದುರಂತ ಮಾದರಿಯ ಮತ್ತೊಂದು ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ನಕಲಿ ಮದ್ಯಸೇವನೆಯಿಂದ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. 

‘ಮುಜಫ್ಪರ್‌ಪುರ ಜಿಲ್ಲೆಯ ಕಾಂತಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿರಸಿಯಾ ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳು ನಕಲಿ ಮದ್ಯಸೇವಿಸಿ ಸಾವಿಗೀಡಾಗಿದ್ದಾರೆ. ಇವರಿಬ್ಬರೂ ಮದ್ಯ ಸೇವಿಸಿ ಅಸ್ವಸ್ಥಗೊಂಡಿದ್ದರು. ಇನ್ನಿಬ್ಬರು ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಯಂತ್ ಕಾಂತ್ ತಿಳಿಸಿದ್ದಾರೆ. 

‘ಮೃತಪಟ್ಟವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತಪಟ್ಟವರ ಹಾಗೂ ಅಸ್ವಸ್ಥಗೊಂಡಿರುವವರ ಕುಟುಂಬಗಳ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಸಂಬಂಧಿಕರ ಹೇಳಿಕೆಯ ಪ್ರಕಾರ ಇವರೆಲ್ಲರೂ ಮದ್ಯಸೇವಿಸಿದ್ದರು ಎಂದು ದೃಢಪಟ್ಟಿದೆ’ ಎಂದು ಜಯಂತ್ ಮಾಹಿತಿ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು