ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗದು: ಕೇಂದ್ರ

Last Updated 15 ಜನವರಿ 2023, 14:58 IST
ಅಕ್ಷರ ಗಾತ್ರ

ನವದೆಹಲಿ: ಎತ್ತಿನಹೊಳೆ ಏತ ನೀರಾವರಿ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಗೆ 13.93 ಹೆಕ್ಟೇರ್‌ನಷ್ಟು ಅರಣ್ಯ ಪ್ರದೇಶವನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದ್ದು, ಇದರಿಂದ ಪರಿಸರದ ಮೇಲೆ ಯಾವುದೇ ಪರಿಣಾಮ ಉಂಟಾಗದು ಎಂದು ಹೇಳಿದೆ.

ಇದು ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಯೋಜನೆಯಾಗಿದೆ. ಹೀಗಾಗಿ, ಯೋಜನೆ ಅನುಷ್ಠಾನಕ್ಕೆ 2006ರ ಪರಿಸರ ಪರಿಣಾಮ ಮೌಲ್ಯಮಾಪನ (ಇಐಎ) ಅಧಿಸೂಚನೆ ಹಾಗೂ 2009ರ ತಿದ್ದುಪಡಿ ಅನ್ವಯವಾಗುವುದಿಲ್ಲ. ಹೀಗಾಗಿ, ಈ ಯೋಜನೆಗೆ ‘ಪರಿಸರ ಅನುಮತಿ’ಯಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ಪ್ರಹ್ಲಾದ ಸಿಂಗ್‌ ಪಟೇಲ್‌ ತಿಳಿಸಿದ್ದಾರೆ.

ಈ ಯೋಜನೆ ಕುರಿತು ಜೆಡಿಯುನ ರಾಜ್ಯಸಭಾ ಸದಸ್ಯ ಅನಿಲ್‌ ಪ್ರಸಾದ್‌ ಹೆಗ್ಡೆ ಅವರ ಪ್ರಶ್ನೆಗೆ, ಸಚಿವ ಪಟೇಲ್‌ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT