ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದಲ್ಲಿ 10ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಯೋಗ ಸೇರ್ಪಡೆ

Last Updated 21 ಜೂನ್ 2021, 9:46 IST
ಅಕ್ಷರ ಗಾತ್ರ

ಚಂಡೀಗಡ: ‘ಪ್ರಸಕ್ತ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಯೋಗವನ್ನು ಸೇರ್ಪಡೆ ಮಾಡಲಾಗಿದೆ’ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸೋಮವಾರ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,‘ ಯೋಗವು ಮಕ್ಕಳ ದೈನಂದಿನ ಜೀವನದ ಭಾಗವಾಗಿರಬೇಕು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೇಗೆ ನಮಗೆ ಆಮ್ಲಜನಕ, ಆಹಾರ ಮತ್ತು ನೀರು ಅವಶ್ಯಕವೋ, ಅದೇ ರೀತಿ ದೇಹವನ್ನು ಆರೋಗ್ಯಕರವಾಗಿಡಲು ಯೋಗವೂ ಅಗತ್ಯ’ ಎಂದು ಹೇಳಿದರು.

‘ಸೈದ್ಧಾಂತಿಕ ಮತ್ತು ಪ್ರಾಯೋಗಿಕ ವಿಷಯಗಳನ್ನು ಒಳಗೊಂಡಿರುವ ರೀತಿಯಲ್ಲಿದೈಹಿಕ ಶಿಕ್ಷಣದ ಮಾದರಿಯಲ್ಲಿ ಯೋಗದ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಾಗುವುದು’ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ತಳಮಟ್ಟದಿಂದ ಯೋಗವು ಬೆಳೆಯುತ್ತಾ ಬರಬೇಕು. ಯೋಗವು ಜನರ ಜೀವನ ಶೈಲಿಯಾಗಿ ರೂಪುಗೊಳ್ಳಬೇಕು. ಇದಕ್ಕಾಗಿ 1,000 ಗ್ರಾಮಗಳಲ್ಲಿ ವ್ಯಾಯಾಮ ಶಾಲೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಈವರೆಗೆ 550 ಗ್ರಾಮಗಳಲ್ಲಿ ವ್ಯಾಯಾಮ ಶಾಲೆಗಳನ್ನು ಆರಂಭಿಸಲಾಗಿದೆ. 1,000 ಯೋಗ ತರಬೇತುದಾರರು ಮತ್ತು 22 ಕೋಚ್‌ಗಳನ್ನು ನೇಮಿಸಲಾಗುವುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT