ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶೀಘ್ರದಲ್ಲೇ ಉತ್ತರ ಪ್ರದೇಶದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯ

Last Updated 25 ಸೆಪ್ಟೆಂಬರ್ 2022, 9:53 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಯೋಗ ಕಡ್ಡಾಯಗೊಳಿಸಲಾಗುವುದು ಎಂದು ವರದಿಯಾಗಿದೆ.

ಶಾಲಾ ವಿದ್ಯಾರ್ಥಿಗಳಲ್ಲಿ ಸದೃಢವಾದ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುವುದು, ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಕ್ರೀಡಾಪಟುಗಳನ್ನು ಉತ್ತೇಜಿಸುವ ಗುರಿ ಹೊಂದಲಾಗಿದೆ.

5ರಿಂದ 14 ವರ್ಷದೊಳಗಿನ ಪ್ರತಿಭೆಗಳನ್ನು ಗುರುತಿಸಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆಯ ಮೂಲಕ ಕ್ರೀಡಾ ವ್ಯವಸ್ಥೆಯನ್ನು ಬಲಪಡಿಸುವ ಗುರಿ ಹೊಂದಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಕ್ರೀಡೆ) ನವನೀತ್ ಸೆಹಗಲ್ ತಿಳಿಸಿದ್ದಾರೆ.

ಸಮಾಜದ ಎಲ್ಲ ವಿಭಾಗದಲ್ಲೂ ಕ್ರೀಡೆಯನ್ನು ಪ್ರೋತ್ಸಾಹಿಸಲು ಉತ್ತರದ ಪ್ರದೇಶ ಕ್ರೀಡಾ ಅಭಿವೃದ್ಧಿ ಮತ್ತು ಪ್ರಚಾರ ಸಮಿತಿ ಕ್ರಮ ಕೈಗೊಳ್ಳುತ್ತಿದೆ.

ಎಲ್ಲಾ ಜಿಲ್ಲಾ ಕೇಂದ್ರದ ಕ್ರೀಡಾಂಗಣದಲ್ಲೂ ಯೋಗ ತರಬೇತಿ ಹಾಗೂ ಅಭ್ಯಾಸಕ್ಕಾಗಿ ಸೌಲಭ್ಯಗಳನ್ನು ಒದಗಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT