ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪುಕೋಟೆಯಲ್ಲಿ ನಡೆದ ಘಟನೆಯಿಂದ ತಲೆತಗ್ಗಿಸುವಂತಾಗಿದೆ: ಯೋಗೇಂದ್ರ ಯಾದವ್

Last Updated 27 ಜನವರಿ 2021, 7:56 IST
ಅಕ್ಷರ ಗಾತ್ರ

ನವದೆಹಲಿ: ಟ್ರ್ಯಾಕ್ಟರ್‌ ರ್‍ಯಾಲಿಯ ಸಂದರ್ಭದಲ್ಲಿ ರೈತರು ನಡೆದುಕೊಂಡ ರೀತಿಗೆ ನಾನು ತಲೆತಗ್ಗಿಸುತ್ತೇನೆ. ಜತೆಗೆ, ಹಿಂಸಾಚಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದೇನೆ ಎಂದು ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಿಂಸಾಚಾರವು ಯಾವುದೇ ಪ್ರತಿಭಟನೆಯ ಮೇಲೆ ತಪ್ಪಾದ ರೀತಿಯಲ್ಲಿ ಪರಿಣಾಮ ಬೀರುತ್ತದೆ. ಯಾರು ಹಿಂಸಾಚಾರ ನಡೆಸಿದರು ಎಂದು ನಾನು ಹೇಳಲಾರೆ. ಆದರೆ, ನಾವು ಹಿಂಸಾಚಾರವನ್ನು ಪ್ರತಿಭಟನೆಯಿಂದ ಹೊರಗಿಟ್ಟಿದ್ದೇವೆ ಎಂದು ಭಾವಿಸಿದ್ದೇವೆ’ ಎಂದು ಹೇಳಿದ್ದಾರೆ.

‘ನಾವು ಕೈಗೊಂಡ ತೀರ್ಮಾನಗಳಿಗೆ ಎಲ್ಲರೂ ಬದ್ಧರಾಗಿರಬೇಕು. ಯಾವುದೇ ಕಾರಣಕ್ಕೂ ದಾರಿತಪ್ಪಬಾರದು ಎಂದು ನಿರಂತರವಾಗಿ ಮನವಿ ಮಾಡಿದ್ದೇನೆ. ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಿದರೆ ಮಾತ್ರ ಆಂದೋಲನ ಯಶಸ್ವಿಯಾಗುತ್ತದೆ’ ಎಂದರು.

ಹಲವೆಡೆ ಪ್ರತಿಭಟನಾಕಾರರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದಾರೆ. ಸತತ ಎರಡು ತಿಂಗಳಿನಿಂದ ಶಾಂತಯುತವಾಗಿ ನಡೆಸಿದ ಆಂದೋಲನ ಇದೀಗ ಹದಗೆಟ್ಟಿದ್ದು, ಹಿಂಸಾಚಾರದ ಹಿಂದೆ ಸಮಾಜವಿರೋಧಿ ಶಕ್ತಿಗಳು ನುಸುಳಿವೆ ಎಂದು ಅವರು ಆರೋಪಿಸಿದರು.

ಹಿಂಸಾಚಾರದಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ಬಂಧನಕ್ಕೆ ಆಗ್ರಹ: ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ಅವರನ್ನು ಬಂಧಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ #ArrestYogendraYadav ಹ್ಯಾಷ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT