ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಹೆಸರಲ್ಲಿ ಸಾಂಸ್ಕೃತಿಕ ಕೇಂದ್ರ, ಸ್ಮಾರಕ: ಯೋಗಿ ಘೋಷಣೆ

Last Updated 6 ಡಿಸೆಂಬರ್ 2022, 14:26 IST
ಅಕ್ಷರ ಗಾತ್ರ

ಲಖನೌ: ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಸಾಂಸ್ಕೃತಿಕ ಕೇಂದ್ರ ಹಾಗೂ ಸ್ಮಾರಕವನ್ನು ನಿರ್ಮಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ಘೋಷಿಸಿದರು.

ಅಂಬೇಡ್ಕರ್‌ ಅವರ ಪುಣ್ಯತಿಥಿಯಂದು ಹಜರತ್‌ಗಂಜ್ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು,ಸರ್ಕಾರವು ಬಾಬಾಸಾಹೇಬ್ ಹೆಸರಿನಲ್ಲಿ ಭವ್ಯವಾದ ಸಾಂಸ್ಕೃತಿಕ ಕೇಂದ್ರ ಮತ್ತು ಸ್ಮಾರಕವನ್ನು ನಿರ್ಮಿಸಲಿದೆ. ಸ್ಮಾರಕವು ಅಂಬೇಡ್ಕರ್‌ ಅವರ ಆದರ್ಶಗಳನ್ನು ಇಂದಿನ ಮತ್ತು ಭವಿಷ್ಯದ ಪೀಳಿಗೆಗೆ ಪ್ರಸ್ತುತಪಡಿಸುತ್ತದೆ ಎಂದು ಹೇಳಿದರು.

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಾಬಾಸಾಹೇಬರ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಥಾವು, ಮುಸಾಹರ್, ಕೋಲ್, ವಂಟಂಗಿಯಂತಹ ವಂಚಿತ ವರ್ಗಗಳಿಗೆ ಸಹಾಯ ಮಾಡಿದ್ದೇವೆ, ರಾಜ್ಯ ಸರ್ಕಾರ ಶೋಷಿತರು ಮತ್ತು ಶೋಷಿತ ವರ್ಗಗಳ ಪರವಾಗಿ ನಿಂತಿದೆ ಎಂದರು.

ಕೊರೋನಾ ಅವಧಿಯಲ್ಲಿ ಬಡವರಿಗೆ ನೀಡಲಾದ ವಸತಿ ಯೋಜನೆ, ಶೌಚಾಲಯಗಳ ನಿರ್ಮಾಣ, ಉಚಿತ ವಿದ್ಯುತ್ ಮತ್ತು ಪಡಿತರವನ್ನು ಉಲ್ಲೇಖಿಸಿದ ಆದಿತ್ಯನಾಥ್, ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಅಂಬೇಡ್ಕರ್ ತೋರಿಸಿದ ಮಾರ್ಗವನ್ನು ಅನುಸರಿಸುತ್ತಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT