ಮಂಗಳವಾರ, ಮೇ 18, 2021
30 °C

ಕಚೇರಿ ಸಿಬ್ಬಂದಿಗೆ ಕೋವಿಡ್: ಯೋಗಿ ಆದಿತ್ಯನಾಥ್‌ ಪ್ರತ್ಯೇಕವಾಸ

ಪಿಟಿಐ‌ Updated:

ಅಕ್ಷರ ಗಾತ್ರ : | |

ಲಖನೌ: ಕಚೇರಿಯ ಕೆಲ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರತ್ಯೇಕ ವಾಸದಲ್ಲಿದ್ದಾರೆ.

‘ನನ್ನ ಜತೆ ಸಂಪರ್ಕದಲ್ಲಿದ್ದ ಕೆಲವರಲ್ಲಿ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿದ್ದೇನೆ. ವರ್ಚುವಲ್ ಆಗಿ ಕಾರ್ಯನಿರ್ವಹಿಸುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಆದರೆ, ಕೋವಿಡ್‌ ತಗುಲಿದ ಅಧಿಕಾರಿಗಳ ಹೆಸರನ್ನು ಯೋಗಿ ಅವರು ಬಹಿರಂಗಪಡಿಸಿಲ್ಲ.

ಓದಿ: 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು