ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ಯೋಗಿ ಆದಿತ್ಯನಾಥ್

Last Updated 13 ಮಾರ್ಚ್ 2022, 15:14 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಗೆ ಭೇಟಿ ಕೊಟ್ಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಬಳಿಕ ಅವರು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಯೋಗಿ ಆದಿತ್ಯನಾಥ್ ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 403 ಕ್ಷೇತ್ರಗಳ ಪೈಕಿ 255 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ 37 ವರ್ಷಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಆಡಳಿತ ಪಕ್ಷ ಎನಿಸಿಕೊಂಡಿದೆ.

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥ್, ಪ್ರಮಾಣವಚಣ ಹಾಗೂ ಹೊಸ ಸಚಿವ ಸಂಪುಟದಲ್ಲಿ ಯಾರೆಲ್ಲ ಇರಲಿದ್ದಾರೆ ಎಂಬುದರ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT