ಬುಧವಾರ, ಅಕ್ಟೋಬರ್ 28, 2020
28 °C
ಸಾಮೂಹಿಕ ಅತ್ಯಾಚರಕ್ಕೊಳಗಾದ ಮಹಿಳೆ ಸಾವು

ಉತ್ತರ ಪ್ರದೇಶದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಪ್ರಿಯಾಂಕ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕ ವಾದ್ರಾ, ‘ರಾಜ್ಯದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ಭದ್ರತೆಯಿಲ್ಲ‘ ಎಂದು ದೂರಿದ್ದಾರೆ.

‘ಹತ್ರಾಸ್‌ನಲ್ಲಿ ರಾಕ್ಷಸಿ ವರ್ತನೆಗೆ ಬಲಿಯಾದ ದಲಿತ ಹುಡುಗಿ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಎರಡು ವಾರಗಳಿಂದ ಆಕೆ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಈ ಮಹಿಳೆಯ ಕೊಲೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

‘ಹತ್ರಾಸ್, ಶಹಜಹಾನ್ಪುರ ಮತ್ತು ಗೋರಖ್ಪುರಗಳಲ್ಲಿ ಒಂದರ ನಂತರ ಒಂದರಂತೆ ಅತ್ಯಾಚಾರದ ಘಟನೆಗಳು ನಡೆಯುತ್ತಿದ್ದು, ಈ ಘಟನೆಗಳು ರಾಜ್ಯವನ್ನೇ ಬೆಚ್ಚಿಬೀಳಿಸಿವೆ‘ ಎಂದು ದೂರಿದ ಪ್ರಿಯಾಂಕ ವಾದ್ರಾ, ‘ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಅಪರಾಧಿಗಳು ಬಹಿರಂಗವಾಗಿ ಅಪರಾಧಗಳನ್ನು ಮಾಡುತ್ತಿದ್ದಾರೆ‘ ಎಂದು ಆರೋಪಿಸಿದ್ದಾರೆ. ‘ರಾಜ್ಯದ ಮಹಿಳೆಯರ ಸುರಕ್ಷತೆ ನಿಮ್ಮ ಜವಾಬ್ದಾರಿ‘ ಎಂದು ಟ್ವೀಟ್ ಮಾಡಿದ್ದಾರೆ.

ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆಯಲ್ಲಿ ದಲಿತ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಚಾರವೆಸಗಿದ್ದರು. ಘಟನೆಯಲ್ಲಿ ಸಂತ್ರಸ್ಥಳಾದವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು