ನವದೆಹಲಿ: ಜೈಲಿಗೆ ಹಾಕಿ ನೀವು ನನಗೆ ತೊಂದರೆ ಕೊಡಬಹುದು. ಆದರೆ ನನ್ನ ಆತ್ಮಬಲವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಜೈಲಿನಿಂದ ಸಂದೇಶ ರವಾನಿಸಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ದೆಹಲಿ ಸಿಸೋಡಿಯಾ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು ಮಾರ್ಚ್ 17ರವರೆಗೆ ಜಾರಿ ನಿರ್ದೇಶನಾಲಯದ (ಇ.ಡಿ) ವಶಕ್ಕೆ ನೀಡಿದೆ.
ಇದನ್ನೂ ಓದಿ: ಸಿಸೋಡಿಯಾ ಇದೇ 17ರ ವರೆಗೆ ಇ.ಡಿ ವಶಕ್ಕೆ
ನೀವು ನನ್ನನ್ನು ಜೈಲಿಗೆ ಹಾಕುವ ಮೂಲಕ ತೊಂದರೆ ಕೊಡಬಹುದು. ಆದರೆ ನನ್ನ ಆತ್ಮಬಲವನ್ನು ಕುಗ್ಗಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರಿಂದ ತೊಂದರೆಗೊಳಗಾದರು. ಆದರೆ ಅವರ ಉತ್ಸಾಹ ಕುಂದಲಿಲ್ಲ ಎಂದು ಜೈಲಿನಿಂದ ಮನೀಷ್ ಸಿಸೋಡಿಯಾ ಕಳುಹಿಸಿದ ಸಂದೇಶವನ್ನು ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರುವರಿ 26ರಂದು ಆಮ್ ಆದ್ಮಿ ಪಕ್ಷದ ಮುಖಂಡ ಸಿಸಿಯೋಡಿಯಾರನ್ನು ಸಿಬಿಐ ಬಂಧಿಸಿತ್ತು. ಬಳಿಕ ಈ ವಾರ ಇ.ಡಿ ತನಿಖಾ ಸಂಸ್ಥೆಯಿಂದಲೂ ಬಂಧನಕ್ಕೊಳಗಾಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.