ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೂರ್ಣಾವಧಿ ತರಗತಿ ನಡೆಸದೆ ಶೇ 70 ಹಾಜರಾತಿ ನಿರೀಕ್ಷಿಸಬೇಡಿ’

Last Updated 25 ಆಗಸ್ಟ್ 2020, 11:51 IST
ಅಕ್ಷರ ಗಾತ್ರ

ನವದೆಹಲಿ: ಒಂದು ಕೋರ್ಸ್‌ಗೆ ನಿಗದಿಪಡಿಸಿರುವ ಅವಧಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸದೆ, ಅಂತಿಮ ಪರೀಕ್ಷೆಗೆ ಹಾಜರಾಗಲು ಶೇ 70ರಷ್ಟು ಹಾಜರಾತಿ ಕಡ್ಡಾಯ ಎಂದು ವಿದ್ಯಾರ್ಥಿಗಳಿಗೆ ಸೂಚಿಸಲು ಸಾಧ್ಯವಿಲ್ಲ ಎಂದು ದೆಹಲಿ ವಿಶ್ವವಿದ್ಯಾಲಯಕ್ಕೆ ದೆಹಲಿ ಹೈಕೋರ್ಟ್‌ ಮಂಗಳವಾರ ಹೇಳಿದೆ.

‘ಕೋರ್ಸ್‌ ಅವಧಿಯ ಶೇ 40 ರಷ್ಟು ತರಗತಿಗಳನ್ನು ನಡೆಸಿ, ವಿದ್ಯಾರ್ಥಿಗಳಿಗೆ ಶೇ 70ರಷ್ಟು ಹಾಜರಾತಿ ಕಡ್ಡಾಯವಾಗಿ ಇರಬೇಕು ಎಂದು ಹೇಳುವುದು ಸೂಕ್ತವಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಹಾಗೂ ನ್ಯಾಯಮೂರ್ತಿ ಪ್ರತೀಕ್‌ ಜಲನ್‌ ಅವರಿದ್ದ ಪೀಠವು ಸೂಚಿಸಿದೆ. ಕಾನೂನು ವಿದ್ಯಾರ್ಥಿಯೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠವು, ಈ ಕುರಿತು ಕೇಂದ್ರ ಸರ್ಕಾರ ಹಾಗೂ ವಿಶ್ವವಿದ್ಯಾಲಯಕ್ಕೆ ನೋಟಿಸ್ ನೀಡಿದೆ.

‘ಅನಾರೋಗ್ಯದ ಕಾರಣದಿಂದ ಮಾರ್ಚ್‌ 2017ರಿಂದ ಅರ್ಜಿದಾರರು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ. ಈ ರೀತಿ ಪ್ರಕರಣಗಳಲ್ಲಿ ಇಂಥ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ ಇರಬೇಕು’ ಎಂದು ಪೀಠವು ವಿಶ್ವವಿದ್ಯಾಲಯಕ್ಕೆ ಸೂಚಿಸಿತು. ಜೊತೆಗೆ ಕಳೆದ ವರ್ಷ ಮೊದಲ ಸೆಮಿಸ್ಟರ್ ಆರಂಭವಾದ ದಿನ ಹಾಗೂ ಪರೀಕ್ಷೆ ನಡೆದ ದಿನದ ಮಾಹಿತಿಯನ್ನು ನೀಡಲು ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT