ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶ: ಯುವತಿಯ ಮೇಲೆ ಇಬ್ಬರಿಂದ ಅತ್ಯಾಚಾರ

Last Updated 9 ಅಕ್ಟೋಬರ್ 2021, 6:41 IST
ಅಕ್ಷರ ಗಾತ್ರ

ಮುಜಾಫರ್‌ನಗರ (ಉತ್ತರ ಪ್ರದೇಶ): ಇಲ್ಲಿನ ಗ್ರಾಮವೊಂದರಲ್ಲಿ 22 ವರ್ಷದ ಯುವತಿಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಲ್ಲದೆ ಈ ಕೃತ್ಯವನ್ನು ಯುವಕರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಯುವತಿಯನ್ನು ಪೀಡಿಸಿದ್ದಾರೆ. ಈ ಕುರಿತು ಭೋಪಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆ ಒದಗಿಸುವ ನೆಪದಲ್ಲಿ ಯೋಗೀಶ್‌ ಕುಮಾರ್‌ ಮತ್ತು ಬಬ್ಲು ಎಂಬುವರು ಯುವತಿಯನ್ನು ಹೊಲಕ್ಕೆ ಕರೆಸಿಕೊಂಡು ಸರದಿ ಅತ್ಯಾಚಾರ ಎಸಗಿದ್ದಾರೆ. ಇದರಲ್ಲಿ ಒಬ್ಬ ಆರೋಪಿ ತನ್ನ ಮೊಬೈಲ್‌ನಲ್ಲಿ ಈ ಕೃತ್ಯವನ್ನು ಚಿತ್ರೀಕರಿಸಿದ್ದಾನೆ.

ಮೊಬೈಲ್‌ನಿಂದ ಈ ದೃಶ್ಯಾವಳಿಯನ್ನು ಅಳಿಸುವ ನೆಪದಲ್ಲಿ ಯುವತಿಯನ್ನು ಕರೆಸಿಕೊಂಡ ಯೋಗೀಶ್‌ ಮತ್ತೆ ಅತ್ಯಾಚಾರ ಎಸಗಿದ್ದಾನೆ. ಬಳಿಕವೂ ಆತ ವಿಡಿಯೊ ಅನ್ನು ಅಳಿಸದೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸ್‌ ಠಾಣಾ ಅಧಿಕಾರಿ ರಾಜ್‌ಕುಮಾರ್‌ ರಾಣಾ ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಕಲಂ 376 ಮತ್ತು 506ರಡಿ ಪ್ರಕರಣ ದಾಖಲಿಸಿರುವುದಾಗಿ ಅವರು ಹೇಳಿದ್ದಾರೆ.

ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT