ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂಪುರ್‌ ಶರ್ಮಾ ಬೆಂಬಲಿಸಿ ಪೋಸ್ಟ್‌: ಯುವಕನ ಮೇಲೆ ಹಲ್ಲೆ

Last Updated 6 ಆಗಸ್ಟ್ 2022, 20:45 IST
ಅಕ್ಷರ ಗಾತ್ರ

ಮುಂಬೈ: ‘ಬಿಜೆಪಿ ವಕ್ತಾರೆಯಾಗಿದ್ದ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸುವ ರೀತಿಯ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ಅಹ್ಮದ್‌ನಗರ ಜಿಲ್ಲೆಯಲ್ಲಿ ಯುವಕನೊಬ್ಬನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ’ ಎಂದು ಬಿಜೆಪಿ ಶಾಸಕ ನಿತೇಶ್‌ ರಾಣೆ ಆರೋಪಿಸಿದ್ದಾರೆ.

‘10 ರಿಂದ 12 ಮಂದಿ ಮುಸ್ಲಿಂ ಯುವಕರು ಪ್ರತೀಕ್‌ ಪವಾರ್‌ ಎಂಬಾತನ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಕರ್ಜತ್‌ನಲ್ಲಿ ಗುರುವಾರ ಘಟನೆ ನಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದಾನೆ. ಆರೋ‍ಪಿಗಳನ್ನು ಶೀಘ್ರವೇ ಬಂಧಿಸಬೇಕು. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT