ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಯುವಕನ ಶವ ತುಂಬಿಸಿದ್ದ ಬ್ಯಾಗ್‌ ಪತ್ತೆ

Last Updated 25 ಮಾರ್ಚ್ 2022, 7:39 IST
ಅಕ್ಷರ ಗಾತ್ರ

ನವದೆಹಲಿ:22 ವರ್ಷದ ಯುವಕನೊಬ್ಬನ ಶವವನ್ನುತುಂಬಿಸಿದ್ದ ಪ್ರಯಾಣಿಕರ ಬ್ಯಾಗ್‌ವೊಂದು ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಶುಕ್ರವಾರ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಮೃತ ಯುವಕನ ಗುರುತು ಸಿಕ್ಕಿಲ್ಲ.

ಈ ಕುರಿತು ಮಾತನಾಡಿರುವ ಡಿಸಿಪಿ ಶಮೀರ್ ಶರ್ಮಾ, ಪ್ರಕರಣ ಸಂಬಂಧ ಮಂಗೋಲ್‌ಪುರಿ ಪೊಲೀಸ್ ಠಾಣೆಗೆ ಬೆಳಗ್ಗೆ ಸುಮಾರು 7ಕ್ಕೆ ಕರೆ ಬಂದಿದೆ. ಅದರಂತೆ, ಮಂಗೋಲ್‌ಪುರಿ ವೈ ಬ್ಲಾಕ್‌ ಎದುರು ಇರುವ ಪೀರ್ ಬಾಬಾ ಮಜಾರ್ ಮುಖ್ಯರಸ್ತೆ ಸಮೀಪದಲ್ಲಿರುವ ಘಟನಾಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ ಎಂದು ತಿಳಿಸಿದ್ದಾರೆ.

'ಪೊಲೀಸರು ಸ್ಥಳಕ್ಕೆ ತೆರಳಿದ ಸಂದರ್ಭ ನೇರಳೆ (ಪರ್ಪಲ್) ಬಣ್ಣದ ಪ್ರಯಾಣಿಕ ಬ್ಯಾಗ್‌ ಸಿಕ್ಕಿದೆ. ಅದರಲ್ಲಿ ಸುಮಾರು 20–22 ವರ್ಷದ ಅಪರಿಚಿತ ವ್ಯಕ್ತಿಯ ಶವ, ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ' ಎಂದು ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯು ಬಿಳಿ ಬಣ್ಣದ ಕುರ್ತಾ ಪೈಜಾಮ ಧರಿಸಿದ್ದಾಗಿಯೂ ಹೇಳಿದ್ದಾರೆ.

ಈ ಸಂಬಂಧ ಐಪಿಸಿಯ ಸೆಕ್ಷನ್‌ 302ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವಪೊಲೀಸರು ತನಿಖೆ ಆರಂಭಿಸಿದ್ದಾರೆ.

'ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಗಾಗಿ ಹಲವು ತಂಡಗಳನ್ನು ರಚಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ' ಎಂದೂ ಡಿಸಿಪಿ ತಿಳಿಸಿದ್ದಾರೆ.

ಅಕ್ಕಪಕ್ಕದ ಠಾಣೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಕಾಣೆಯಾದವರ ಬಗ್ಗೆ ದಾಖಲಾಗಿರುವ ಪ್ರಕರಣಗಳ ಪರಿಶೀಲನೆಗೆ ತಿಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT