ಗುರುವಾರ , ಮೇ 19, 2022
21 °C

ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ, ಶಾ ಮನೆ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಯುವ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂತೋಷ್‌ ಸಾವಿಗೆ ಈಶ್ವರಪ್ಪ ಕಾರಣ ಎಂದು ಘೋಷಣೆ ಕೂಗಿದರು.

’ಬಿಜೆಪಿಯ 40 ಪರ್ಸೆಂಟ್‌ ಸರ್ಕಾರದ ದುರಾಡಳಿತಕ್ಕೆ ಅದೇ ಪಕ್ಷದ ಕಾರ್ಯಕರ್ತನೊಬ್ಬ ಬಲಿಯಾಗಿದ್ದಾನೆ.  ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರು ಏಕೆ ಮೌನವಹಿಸಿದ್ದಾರೆ’ ಎಂದು ಶ್ರೀನಿವಾಸ್‌ ಪ್ರಶ್ನಿಸಿದ್ದಾರೆ.

ಇವುಗಳನ್ನೂ ಓದಿ..

ರಾಜೀನಾಮೆ ಕೊಡಲಾರೆ ಎಂದ ಸಚಿವ ಈಶ್ವರಪ್ಪ, ಕಾಂಗ್ರೆಸ್‌ಗೆ ಎರಡು ಪ್ರಶ್ನೆ

ಸಂತೋಷ್ ಕುಟುಂಬಸ್ಥರ ದೂರು ಆಧರಿಸಿ ಈಶ್ವರಪ್ಪ ಹಾಗೂ ಇಬ್ಬರ ಮೇಲೆ ಎಫ್‌ಐರ್: ಐಜಿಪಿ

ಶೇ 40ರಷ್ಟು ಕಮಿಷನ್: ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದ ಸಂತೋಷ ಪಾಟೀಲ ಆತ್ಮಹತ್ಯೆ

’ಈಶ್ವರಪ್ಪ ಅವರನ್ನು ತಕ್ಷಣವೇ ಬಂಧಿಸಿ ಸಚಿವ ಸಂಪುಟದಿಂದ ವಜಾಗೊಳಿಸಬೇಕು‘ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು