ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ: ಇರಾನಿ ಮಗಳದ್ದು ಎನ್ನಲಾದ ರೆಸ್ಟೋರೆಂಟ್ ಎದುರು ಯುವ ಕಾಂಗ್ರೆಸ್ ಪ್ರತಿಭಟನೆ

Last Updated 24 ಜುಲೈ 2022, 10:29 IST
ಅಕ್ಷರ ಗಾತ್ರ

ಪಣಜಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಮಗಳು ಗೋವಾದಲ್ಲಿ ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಅಕ್ರಮ ಬಾರ್, ರೆಸ್ಟೋರೆಂಟ್ ಎದುರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದ್ದಾರೆ.

ಅಸ್ಸಾಗಾವೊ ಗ್ರಾಮದಲ್ಲಿರುವ ರೆಸ್ಟೋರೆಂಟ್ ಎದುರು ಗೋವಾ ಯುವ ಕಾಂಗ್ರೆಸ್ ಅಧ್ಯಕ್ಷ ವರದ್ ಮರ್‌ಡೋಲ್ಕರ್ ಹಾಗೂ ರಾಜ್ಯ ಘಟಕದ ವಕ್ತಾರ ಅಮರನಾಥ್ ಪಂಜಿಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಾರ್ ಪರವಾನಗಿ ನವೀಕರಣಕ್ಕೆ ಮೃತಪಟ್ಟ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿತ್ತು ಎಂದು ಕಾಂಗ್ರೆಸ್‌ನ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಟ್ಕರ್ ಆರೋಪಿಸಿದ್ದಾರೆ.

ಸ್ಮೃತಿ ಇರಾನಿ ಅವರ ಮಗಳು ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಶನಿವಾರ ಆರೋಪಿಸಿದ್ದ ಕಾಂಗ್ರೆಸ್, ಇರಾನಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿತ್ತು. ಆದರೆ, ಕಾಂಗ್ರೆಸ್ ಆರೋಪಗಳನ್ನು ಸ್ಮೃತಿ ಇರಾನಿ ಅಲ್ಲಗಳೆದಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ₹5,000 ಕೋಟಿ ಲೂಟಿ ಮಾಡಿದ್ದಾರೆ ಎಂದು ಹೇಳಿದ್ದಕ್ಕಾಗಿ ನನ್ನ ಮಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದರು.

ತಮ್ಮ ಮೇಲಿನ ಮಾಧ್ಯಮ ವರದಿಗಳು ಹಾಗೂ ಕಾಂಗ್ರೆಸ್‌ ಆರೋಪಗಳನ್ನು ಸ್ಮೃತಿ ಇರಾನಿ ಮಗಳು ಝೋಯಿಶ್‌ ಇರಾನಿ ಕೂಡ ಅಲ್ಲಗಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT