ಮಂಗಳವಾರ, ಮಾರ್ಚ್ 21, 2023
22 °C

ದ್ವಿಚಕ್ರ ವಾಹನದಲ್ಲಿ ಪ್ರಣಯ : ಲಖನೌದಲ್ಲಿ ಯುವಕನ ಬಂಧನ

ಐಎಎನ್‌ಎಸ್‌ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದ ರಾಜಧಾನಿ ಹಜರತ್‌ಗಂಜ್ ಪ್ರದೇಶದಲ್ಲಿ ಸಾರ್ವಜನಿಕವಾಗಿ ದ್ವಿಚಕ್ರ ವಾಹನದಲ್ಲಿಯೇ ತನ್ನ ಗೆಳತಿಯೊಂದಿಗೆ ಪ್ರಣಯದಲ್ಲಿ ತೊಡಗಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ವಿಕ್ಕಿ ಬಂಧಿತ ಯುವಕ. ಆತನ ಜೊತೆಗಿದ್ದ ಬಾಲಕಿ ಅಪ್ರಾಪ್ತಳು. ಈ ಯುವ ಜೋಡಿ ದ್ವಿಚಕ್ರ ವಾಹನದಲ್ಲಿ ಪ್ರಣಯದಲ್ಲಿ ತೊಡಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದನ್ನು ಆಧರಿಸಿ ತನಿಖೆ ನಡೆಸಿರುವ ಪೊಲಿಸರು ವಿಡಿಯೊದಲ್ಲಿದ್ದ ಯುವಕನನ್ನು ಬಂಧಿಸಿದ್ದಾರೆ.

ಈ ಸಂಬಂಧ ಸೆಕ್ಷನ್ 294, 279 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಪ್ಪಿಸ್ಥರ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಜರತ್‌ಗಂಜ್ ಪೊಲೀಸರು ತಿಳಿಸಿದ್ದಾರೆ.

ಘಟನೆ ವೇಳೆ ಬಳಸಿದ್ದ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು