ಶುಕ್ರವಾರ, ಏಪ್ರಿಲ್ 16, 2021
31 °C

ಆಂಧ್ರ: ನಗರಸಭೆ, ಮಹಾನಗರ ಪಾಲಿಕೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಮುನ್ನಡೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮರಾವತಿ: ಆಂಧ್ರಪ್ರದೇಶದ 6 ಮಹಾನಗರ ಪಾಲಿಕೆ ಹಾಗೂ 75 ನಗರಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ವೈಎಸ್‌ಆರ್‌ ಕಾಂಗ್ರೆಸ್‌ ಭರ್ಜರಿ ಜಯದತ್ತ ಮುನ್ನಡೆ ಸಾಧಿಸಿದೆ. 

ಭಾನುವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಮುಂದಿನ ಕೆಲವೇ ಗಂಟೆಗಳಲ್ಲಿ ಫಲಿತಾಂಶ ಬರಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

6 ಮಹಾನಗರ ಪಾಲಿಕೆಗಳಲ್ಲೂ ವೈಎಸ್‌ಆರ್‌ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿದೆ. ಇನ್ನು 75 ನಗರ ಸಭೆಗಳ ಪೈಕಿ 65 ರಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ, ಕಾಂಗ್ರೆಸ್‌, ಟಿಡಿಪಿ ಪಕ್ಷಗಳು ಹಿನ್ನಡೆಯಲ್ಲಿವೆ ಎಂದು ಮಾಧ್ಯಮಗಳು ತಿಳಿಸಿವೆ.

ಸಂಜೆಗೆ ಸ್ಪಷ್ಟ ಬಹುಮತ ಲಭ್ಯವಾಗಲಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು