ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಎಸ್‌ಆರ್‌ಸಿಪಿ ಸಂಸದ ವೈ.ಎಸ್‌.ಅವಿನಾಶ್‌ ರೆಡ್ಡಿ ಸಿಬಿಐ ಮುಂದೆ ಹಾಜರು

Last Updated 10 ಮಾರ್ಚ್ 2023, 15:44 IST
ಅಕ್ಷರ ಗಾತ್ರ

ಹೈದರಾಬಾದ್: 2019ರಲ್ಲಿ ನಡೆದ ಮಾಜಿ ಸಚಿವ ವೈ.ಎಸ್‌.ವಿವೇಕಾನಂದ ರೆಡ್ಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಂಸದ ವೈ.ಎಸ್‌.ಅವಿನಾಶ್‌ ರೆಡ್ಡಿ ಅವರು ಶುಕ್ರವಾರ ಸಿಬಿಐ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ.

ವಿವೇಕಾನಂದ ಅವರ ಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಕೇಂದ್ರೀಯ ಸಂಸ್ಥೆಯ ಮುಂದೆ ಅವಿನಾಶ್ ಅವರು ಮೂರನೇ ಬಾರಿ ಹಾಜರಾಗಿದ್ದಾರೆ.

ವಿವೇಕಾನಂದ ರೆಡ್ಡಿ ಅವರ ಸಂಬಂಧಿಕರಾಗಿರುವ ಅವಿನಾಶ್ ಅವರು ಸಿಬಿಐ ಸಮನ್ಸ್‌ ಜಾರಿ ಮಾಡಿದ ನಂತರ ಈ ವರ್ಷ ಜನವರಿ ಮತ್ತು ಫೆಬ್ರುವರಿಯಲ್ಲಿ ಸಿಬಿಐ ಮುಂದೆ ಹಾಜರಾಗಿದ್ದಾರೆ.

ವಿವೇಕಾನಂದ ರೆಡ್ಡಿ ಅವರು ಮಾಜಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌.ರಾಜಶೇಖರ್ ರೆಡ್ಡಿ ಸಹೋದರ ಮತ್ತು ಹಾಲಿ ಮುಖ್ಯಮಂತ್ರಿ ವೈ.ಎಸ್‌.ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ. ಇವರು 2019 ಮಾರ್ಚ್‌ 15ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಒಂದು ವಾರಕ್ಕೂ ಮೊದಲು ಪುಲಿವೆಂದುಲದ ಅವರ ನಿವಾಸದಲ್ಲಿ ಕೊಲೆಯಾದರು.

ಈ ಪ್ರಕರಣದ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ವಿಭಾಗದ ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಕೈಗೆತ್ತಿಕೊಂಡಿದ್ದು, 2020ರಲ್ಲಿ ಸಿಬಿಐಗೆ ಹಸ್ತಾಂತರಿಸಿದೆ.

ಸಿಬಿಐ 2021 ಅಕ್ಟೋಬರ್ 26ರಂದು ದೋಷರೋಪ ಪಟ್ಟಿಯನ್ನು ಸಲ್ಲಿಸುವಲ್ಲಿ ವಿಫಲವಾಗಿತ್ತು. ನಂತರ 2022 ಜನವರಿ 31ರಂದು ಪೂರಕ ದೋಷರೋಪ ಪಟ್ಟಿಯನ್ನು ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT