ಬುಧವಾರ, ಮೇ 18, 2022
25 °C

ಉತ್ತರ ಪ್ರದೇಶ: ಲಖನೌದಲ್ಲಿ 2 ಝೀಕಾ ವೈರಸ್‌ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಲಖನೌ, ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಖನೌದಲ್ಲಿ ಝೀಕಾ ವೈರಸ್‌ನ ಎರಡು ಪ್ರಕರಣ ಪತ್ತೆಯಾಗಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಇಲ್ಲಿ ಹೇಳಿದ್ದಾರೆ. ಕಾನ್ಪುರ ಮತ್ತು ಕನೌಜ್‌ ನಂತರ ಲಖನೌ ಈ ವೈರಸ್‌ ಪತ್ತೆಯಾಗುತ್ತಿರುವ ಮೂರನೇ ಜಿಲ್ಲೆಯಾಗಿದೆ. 

ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 111ಕ್ಕೆ ಏರಿದೆ. ಕಾನ್ಪುರದಲ್ಲಿ 108 ಪ್ರಕರಣಗಳು ಮತ್ತು ಕನೌಜ್‌ನಲ್ಲಿ ಒಂದು ಪ್ರಕರಣ ವರದಿಯಾಗಿದೆ. ಕಾನ್ಪುರದಲ್ಲಿ ಇದುವರೆಗೆ 17 ಮಂದಿ ಗುಣಮುಖರಾಗಿದ್ದಾರೆ ಎಂದು ಅಧಿಕಾರಿಯು ವಿವರಿಸಿದರು.

ಝೀಕಾ ಸೋಂಕು ಹರಡುವಿಕೆ ತಡೆಗೆ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್‌ ಮೋಹನ್‌ ಪ್ರಸಾದ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು