ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಝೀಕಾ ಸೋಂಕು: ಮಹಾರಾಷ್ಟ್ರಕ್ಕೆ ಕೇಂದ್ರದ ತಂಡ

Last Updated 2 ಆಗಸ್ಟ್ 2021, 11:22 IST
ಅಕ್ಷರ ಗಾತ್ರ

ನವದೆಹಲಿ: ಝೀಕಾ ಸೋಂಕು ಪರಿಸ್ಥಿತಿಯ ಅಂದಾಜು ಹಾಗೂ ರಾಜ್ಯ ಸರ್ಕಾರಕ್ಕೆ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರವು ಉನ್ನತ ಮಟ್ಟದ ತಂಡವನ್ನುಮಹಾರಾಷ್ಟ್ರಕ್ಕೆ ಕಳುಹಿಸಿಕೊಟ್ಟಿದೆ. ಪುಣೆಯಲ್ಲಿ ಈಚೆಗೆ ಝೀಕಾ ಸೋಂಕಿನ ಒಂದು ಪ್ರಕರಣ ಪತ್ತೆಯಾಗಿತ್ತು ಎಂದು ಆರೋಗ್ಯ ಸಚಿವಾಲಯವು ಈ ಕುರಿತು ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.

ಪುಣೆಯ ಸಾರ್ವಜನಿಕ ಆರೋಗ್ಯ ಪರಿಣತರು, ನವದೆಹಲಿಯ ಲೇಡಿ ಹಾರ್ಡಿಂಗ್ ವೈದ್ಯ ಕಾಲೇಜಿನ ಸ್ತ್ರೀರೋಗ ತಜ್ಞೆ, ಎನ್‌ಐಎಂಆರ್‌ನ ಸೂಕ್ಷ್ಮಾಣುಜೀವಿ ತಜ್ಞರು ಈ ತಂಡದಲ್ಲಿ ಇದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ತಂಡವು ಪರಿಸ್ಥಿತಿಯನ್ನು ಅವಲೋಕಿಸಲಿದೆ. ಝೀಕಾ ನಿರ್ವಹಣೆಗೆ ಕೇಂದ್ರದ ಕ್ರಿಯಾ ಯೋಜನೆ ಜಾರಿಗೊಳಿಸುವ ಕುರಿತು ಸಲಹೆ ನೀಡಲಿದೆ ಎಂದು ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT