ಭಾನುವಾರ, ಜುಲೈ 25, 2021
21 °C

12–18 ವರ್ಷ ವಯಸ್ಸಿನವರಿಗೆ ಸೆಪ್ಟೆಂಬರ್‌ನಿಂದ ಝೈಡಸ್ ಲಸಿಕೆ: ತಜ್ಞರ ಹೇಳಿಕೆ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಸೆಪ್ಟೆಂಬರ್ ವೇಳೆಗೆ 12ರಿಂದ 18 ವರ್ಷ ವಯಸ್ಸಿನವರಿಗೆ ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್‌.ಕೆ. ಆರೋರಾ ತಿಳಿಸಿದ್ದಾರೆ.

ಝೈಡಸ್ ಕ್ಯಾಡಿಲಾ ಲಸಿಕೆಯ ತುರ್ತು ಬಳಕೆಗೆ ಕೆಲವೇ ವಾರಗಳಲ್ಲಿ ಅನುಮೋದನೆ ದೊರೆಯಲಿದೆ ಎಂದು ಅವರು ‘ಎನ್‌ಡಿಟಿವಿ’ಗೆ ತಿಳಿಸಿದ್ದಾರೆ.

ಸೆಪ್ಟೆಂಬರ್‌ ಅಂತ್ಯದ ವೇಳೆಗೆ 12ರಿಂದ 18 ವರ್ಷ ವಯಸ್ಸಿನವರಿಗೆ ಕೋವ್ಯಾಕ್ಸಿನ್ ಲಸಿಕೆ ಕೂಡ ಲಭ್ಯವಾಗುವ ನಿರೀಕ್ಷೆ ಇದೆ. ಈ ವಯಸ್ಸಿನವರಿಗಾಗಿ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

‘ಮೂರನೇ ತ್ರೈಮಾಸಿಕ ಅವಧಿಯಲ್ಲಿ ಅಥವಾ ಜನವರಿ–ಫೆಬ್ರುವರಿ ಆರಂಭದ ವೇಳೆಗೆ 2 ವರ್ಷ ಮೇಲ್ಪಟ್ಟವರ ಬಳಕೆಗೂ ಕೋವ್ಯಾಕ್ಸಿನ್ ಲಭ್ಯವಾಗುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು