ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾ ಪಡೆ

Last Updated 31 ಜುಲೈ 2021, 5:14 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಇಂದು ಬೆಳಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನಾಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ನಂತರ, ಪ್ರತಿ ದಾಳಿ ನಡೆಸಿದ ಸೇನಾಪಡೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.

ಹತರಾದ ಉಗ್ರರ ಗುರುತು ಮತ್ತು ಭಯೋತ್ಪಾದಕ ಸಂಘಟನೆಗಳ ಸಂಬಂಧವನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT