ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಶೀಲ್ಡ್ ಪಡೆದ ಭಾರತೀಯರ ಪ್ರಯಾಣ ಸಮಸ್ಯೆ ಶೀಘ್ರ ಇತ್ಯರ್ಥ: ಅದಾರ್ ಪೂನಾವಾಲಾ

Last Updated 28 ಜೂನ್ 2021, 7:12 IST
ಅಕ್ಷರ ಗಾತ್ರ

ಮುಂಬೈ: ಕೋವಿಶೀಲ್ಡ್ ಲಸಿಕೆ ಪಡೆದವರು ಯುರೋಪ್‌ಗೆ ಪ್ರಯಾಣಿಸಲು ಇರುವ ಅಡ್ಡಿಯನ್ನು ಬಗೆಹರಿಸಿಕೊಡುವುದಾಗಿ ‘ಸೀರಂ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾ’ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಭರವಸೆ ನೀಡಿದ್ದಾರೆ.

‘ಕೋವಿಶೀಲ್ಡ್ ಲಸಿಕೆ ಪಡೆದ ಅನೇಕ ಭಾರತೀಯರ ಯುರೋಪ್‌ ಪ್ರಯಾಣಕ್ಕೆ ಅಡ್ಡಿಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಮಸ್ಯೆ ಬಗ್ಗೆ ಆಯಾ ದೇಶಗಳ ಔಷಧ ನಿಯಂತ್ರಣ ಪ್ರಾಧಿಕಾರಗಳು ಮತ್ತು ರಾಜತಾಂತ್ರಿಕರ ಗಮನ ಸೆಳೆದಿದ್ದು, ಶೀಘ್ರ ಪರಿಹಾರವಾಗುವ ನಿರೀಕ್ಷೆ ಇದೆ’ ಎಂದು ಪೂನಾವಾಲಾ ಟ್ವೀಟ್ ಮಾಡಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ‘ಸೀರಂ ಇನ್‌ಸ್ಟಿಟ್ಯೂಟ್ ಆಫ್‌ ಇಂಡಿಯಾ’ದ ಕೋವಿಶೀಲ್ಡ್ ಲಸಿಕೆ ಪಡೆದವರು ಯುರೋಪ್ ಒಕ್ಕೂಟದ ‘ಗ್ರೀನ್ ಪಾಸ್’ ಪಡೆಯಲು ಅರ್ಹರಲ್ಲ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT