ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರೆ: ನೋಂದಣಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ

Last Updated 22 ಏಪ್ರಿಲ್ 2021, 13:19 IST
ಅಕ್ಷರ ಗಾತ್ರ

ಜಮ್ಮು: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಅಮರನಾಥ ಯಾತ್ರೆಯ ಪ್ರಸಕ್ತ ವರ್ಷದ ನೋಂದಣಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದರು.

‘ಕೋವಿಡ್‌ ಪರಿಸ್ಥಿತಿಯಿಂದಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ (ಎಸ್‌ಎಎಸ್‌ಬಿ) ಗುರುವಾರ ಟ್ವೀಟ್‌ ಮಾಡಿದೆ.

‘ಪರಿಸ್ಥಿತಿ ಸುಧಾರಿಸಿದ ನಂತರ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು’ ಎಂದು ತಿಳಿಸಲಾಗಿದೆ.

ಅಮರನಾಥ ಯಾತ್ರೆಯ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಇದೇ 15ರಿಂದ ಪ್ರಾರಂಭಿಸಲಾಗಿತ್ತು. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ 3,888 ಮೀಟರ್ ಎತ್ತರದ ಅಮರನಾಥ ಗುಹೆಯ ದೇಗುಲದಲ್ಲಿರುವ ಹಿಮದ ಶಿವಲಿಂಗ ದರ್ಶನದ 56 ದಿನಗಳ ಯಾತ್ರೆಯು ಜೂನ್ 28ರಂದು ಪ್ರಾರಂಭವಾಗಿ ಆಗಸ್ಟ್ 22ರಂದು ಮುಕ್ತಾಯಗೊಳ್ಳಲಿದೆ ಎಂದು ತಿಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT