ಭಾರತ–ಪಾಕ್‌ ಉದ್ವಿಗ್ನ ಸ್ಥಿತಿ ಚರ್ಚೆ: ಚೀನಾ

ಬುಧವಾರ, ಏಪ್ರಿಲ್ 24, 2019
23 °C
ಚೀನಾ–ಪಾಕ್‌ ವಿದೇಶಾಂಗ ಸಚಿವರ ನಡುವೆ ಮಾತುಕತೆ

ಭಾರತ–ಪಾಕ್‌ ಉದ್ವಿಗ್ನ ಸ್ಥಿತಿ ಚರ್ಚೆ: ಚೀನಾ

Published:
Updated:

ಬೀಜಿಂಗ್‌: ಪಾಕಿಸ್ತಾನ ಮತ್ತು ಚೀನಾದ ವಿದೇಶಾಂಗ ಸಚಿವರ ನಡುವೆ ಮಂಗಳವಾರ ಇಲ್ಲಿ ನಡೆಯಲಿರುವ ರಕ್ಷಣೆಗೆ ಸಂಬಂಧಿಸಿದ ಮೊದಲ ಮಾತುಕತೆಯಲ್ಲಿ ಪಾಕಿಸ್ತಾನ ಮತ್ತು ಭಾರತದ ನಡುವೆ ಸೃಷ್ಟಿಯಾಗಿರುವ ಉದ್ವಿಗ್ನ ಸ್ಥಿತಿಯ ಕುರಿತು ಚರ್ಚೆ ನಡೆಯಲಿದೆ ಎಂದು ಚೀನಾ ಹೇಳಿದೆ.

ಜೆಷ್‌–ಎ– ಮೊಹಮ್ಮದ್‌ (ಜೆಇಎಂ) ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ಪ್ರಸ್ತಾವಕ್ಕೆ ಚೀನಾ ವಿರೋಧ ವ್ಯಕ್ತಪಡಿಸಿದ ಬಳಿಕ ಪಾಕಿಸ್ತಾನದ ವಿದೇಶಾಂಗ ಸಚಿವ  ಶಾ ಮೆಹಮೂದ್‌ ಖುರೇಷಿ ಅವರು ಚೀನಾಕ್ಕೆ ಭೇಟಿ ನೀಡುತ್ತಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಸ್ಥಿತಿ ಶಮನವಾಗಬೇಕೆಂದು ನೆರೆಯ ರಾಷ್ಟ್ರವಾಗಿರುವ ನಾವು ಬಯಸುತ್ತೇವೆ’ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್‌ ಶಾಂಗ್‌ ಹೇಳಿದ್ದಾರೆ.

‘ಶಾಂತಿ ಸ್ಥಾಪನೆಗಾಗಿ ಎರಡೂ ದೇಶಗಳು ಪರಸ್ಪರ ಮಾತುಕತೆಗೆ ಮುಂದಾಗಬೇಕು’ ಎಂದೂ ಅವರು ಹೇಳಿದ್ದಾರೆ.

‘ಮಸೂದ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಷಯದಲ್ಲಿ ಚೀನಾ ಜವಾಬ್ದಾರಿಯುತವಾಗಿ ವರ್ತಿಸಲಿದೆ. ಈ ಕುರಿತು ಭಾರತ ಮತ್ತು ಪಾಕಿಸ್ತಾನದ ಜೊತೆ ಕೂಡ ಚರ್ಚೆ ನಡೆಸಲಿದೆ’ ಎಂದೂ ಜೆಂಗ್‌ ಹೇಳಿದ್ದಾರೆ.

ಫೆಬ್ರುವರಿ 14ರಂದು ಪುಲ್ವಾಮದಲ್ಲಿ ನಡೆದ ದಾಳಿಯ ಹೊಣೆಯನ್ನು ಜೆಇಎಂ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.

ಮಸೂದ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ಪ್ರಸ್ತಾವವನ್ನು ಫ್ರಾನ್ಸ್‌, ಬ್ರಿಟನ್‌, ಮತ್ತು ಅಮೆರಿಕ ಫೆಬ್ರುವರಿ 27ರಂದು ವಿಶ್ವಸಂಸ್ಥೆಯ ಭದ್ರತಾಮಂಡಳಿಯ ಮುಂದಿರಿಸಿತ್ತು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !