ಬುಧವಾರ, ಸೆಪ್ಟೆಂಬರ್ 22, 2021
29 °C

ಎವರೆಸ್ಟ್‌ ಹೆಬ್ಬಾಗಿಲಿನಲ್ಲಿ ಯೋಗ ಕಾರ್ಯಕ್ರಮ

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ಐದನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ರಾಯಭಾರಿ ಕಚೇರಿಯು ನೇಪಾಳದ ಮೌಂಟ್‌ ಎವರೆಸ್ಟ್‌ ಶಿಖರದ ಹೆಬ್ಬಾಗಿಲು ಥ್ಯಾಂಗ್‌ಬೋಚೆಯಲ್ಲಿ ಭಾನುವಾರ ಯೋಗ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ದೈನಂದಿನ ಜೀವನದಲ್ಲಿ ಯೋಗದ ಮಹತ್ವ ಸಾರಲು ಮತ್ತು ಶಾಂತಿ, ಸೌಹಾರ್ದತೆಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ರಾಯಭಾರಿ ಕಚೇರಿಯ ಪ್ರಕಟಣೆ ತಿಳಿಸಿದೆ.

ನೇಪಾಳದಲ್ಲಿರುವ ಭಾರತದ ರಾಯಭಾರಿ ಮಂಜೀವ್‌ ಸಿಂಗ್‌ ಪುರಿ, ವಿವಿಧ ಸಂಘಟನೆಗಳ ಸದಸ್ಯರು, ಸ್ಥಳೀಯರು ಹಾಗೂ ವಿದೇಶಿ ಪ್ರವಾಸಿಗರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಎಂದೂ ಹೇಳಿದೆ.

ಇದು ಮೌಂಟ್‌ ಎವರೆಸ್ಟ್‌ ಶಿಖರದ ಬೇಸ್‌ ಕ್ಯಾಂಪ್‌ನಲ್ಲಿ ನಡೆದ ಮೊದಲ ಯೋಗ ಕಾರ್ಯಕ್ರಮ.17,600 ಅಡಿ ಎತ್ತರದಲ್ಲಿ  ಪರ್ವತಾರೋಹಿಗಳು ಯೋಗಾಸನ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು