ಇನ್‌ಪುಟ್‌ ಸಬ್ಸಿಡಿ ಬಿಡುಗಡೆಗೆ ಜೂನ್‌ 1 ಗಡುವು: ಸಚಿವ ಆರ್‌.ವಿ.ದೇಶಪಾಂಡೆ

ಮಂಗಳವಾರ, ಜೂನ್ 25, 2019
22 °C
'ರಾಜ್ಯದಲ್ಲಿ 13 ಕೋಟಿ ಮಾನವ ದಿನಗಳ ಸೃಷ್ಟಿ'

ಇನ್‌ಪುಟ್‌ ಸಬ್ಸಿಡಿ ಬಿಡುಗಡೆಗೆ ಜೂನ್‌ 1 ಗಡುವು: ಸಚಿವ ಆರ್‌.ವಿ.ದೇಶಪಾಂಡೆ

Published:
Updated:

ವಿಜಯಪುರ: ‘2018ರ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟಕ್ಕೀಡಾದ ಜಿಲ್ಲೆಯ 1.26 ಲಕ್ಷ ರೈತರಿಗೆ ಇನ್‌ಪುಟ್‌ ಸಬ್ಸಿಡಿ ಬಿಡುಗಡೆಯಾಗಿದ್ದು, ಜೂನ್‌ 1ರೊಳಗೆ ಈ ಎಲ್ಲರ ಖಾತೆಗೆ ಹಣ ಜಮೆ ಮಾಡಬೇಕು’ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ವಿಜಯಪುರ ಜಿಲ್ಲಾಡಳಿತಕ್ಕೆ ಸೂಚಿಸಿದರು.

‘ಈಗಾಗಲೇ 45,000 ರೈತರ ಖಾತೆಗೆ ಇನ್‌ಫುಟ್‌ ಸಬ್ಸಿಡಿ ಜಮೆ ಮಾಡಲಾಗಿದೆ. ಆಧಾರ್‌ ಲಿಂಕ್‌ ಸಮಸ್ಯೆಯಿಂದ ಉಳಿದವರ ಖಾತೆಗೆ ಜಮೆಯಾಗಿಲ್ಲ. ವಾರದೊಳಗೆ ತಾಂತ್ರಿಕ ಸಮಸ್ಯೆ ಬಗೆಹರಿಸಿ, ಫಲಾನುಭವಿ ರೈತರ ಖಾತೆಗೆ ಹಣ ಜಮೆ ಮಾಡುವಂತೆ ಸೂಚಿಸಲಾಗಿದೆ’ ಎಂದು ಭಾನುವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಇಂಡಿ ತಾಲ್ಲೂಕಿನ ನಿಂಬೆ ಬೆಳೆಗಾರರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ. ಎನ್‌ಡಿಆರ್‌ಎಫ್‌ ಮಾರ್ಗಸೂಚಿಯನ್ವಯ ನೆರವು ಒದಗಿಸಲು ಪ್ರಸ್ತಾವನೆ ಸಲ್ಲಿಸುವಂತೆ ತೋಟಗಾರಿಕೆ ಅಧಿಕಾರಿಗಳಿಗೆ ಸೂಚಿಸಿರುವೆ’ ಎಂದು ದೇಶಪಾಂಡೆ ಹೇಳಿದರು.

‘ನಿಂಬೆ ಬೆಳೆಗಾರರಿಗೆ ನೆರವು ಒದಗಿಸಲು ಸಹಕಾರಿಯಾಗುವಂತೆ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ನ ಮಾರ್ಗಸೂಚಿಯಲ್ಲಿ ಯಾವುದೇ ಅಂಶವಿಲ್ಲ. ತೋಟಗಾರಿಕೆ ಸಚಿವರು ಕ್ಯಾಬಿನೆಟ್‌ಗೆ ಈ ವಿಷಯವನ್ನು ತಂದರೇ, ವಿಶೇಷ ಪ್ರಕರಣ ಎಂದು ಪರಿಗಣಿಸಿ, ಕೇಂದ್ರದ ನೆರವಿಗೆ ಮನವಿ ಮಾಡಿಕೊಳ್ಳಬಹುದು’ ಎಂದು ಕಂದಾಯ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ, ರಾಜ್ಯಕ್ಕೆ ಈ ಬಾರಿ 13 ಕೋಟಿ ಮಾನವ ದಿನಗಳನ್ನು ಸೃಷ್ಟಿಸುವ ಗುರಿ ನೀಡಲಾಗಿದೆ. ಕಳೆದ ಬಾರಿಯೂ ಕೂಡ 10.47 ಕೋಟಿ ಮಾನವ ದಿನಗಳ ಸೃಜನೆಯ ಗುರಿಯನ್ನು ನೀಡಲಾಗಿತ್ತು. ಜಿಲ್ಲೆಯಲ್ಲಿ ಈವರೆಗೆ 6.5 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ಹೊಂದಿ, 7.18 ಲಕ್ಷ ಮಾನವ ದಿನಗಳನ್ನು ಸಹ ಸೃಜಿಸಲಾಗಿದೆ’ ಎಂದು ಹೇಳಿದರು.

ನಿರ್ದಾಕ್ಷಿಣ್ಯ ಕ್ರಮ:

‘ಬರ ಪರಿಸ್ಥಿತಿಯನ್ನು ಎದುರಿಸಲು ಸಮರೋಪಾದಿ ಕ್ರಮಗಳನ್ನು ಕೈಗೊಳ್ಳಲು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಆರ್.ವಿ.ದೇಶಪಾಂಡೆ ತಿಳಿಸಿದರು.

‘ಬರ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತಕ್ಕೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸ್ಪಷ್ಟ ನಿರ್ದೇಶನ ನೀಡಿದ್ದೇನೆ. ಜತೆಗೆ ಪತ್ರ ಬರೆಯುವ ಮೂಲಕ ಮಾರ್ಗದರ್ಶನವನ್ನು ಕೊಟ್ಟಿದ್ದೇನೆ. ಉತ್ತಮವಾಗಿ ಕೆಲಸ ನಿರ್ವಹಿಸುವ ಅಧಿಕಾರಿಗಳನ್ನು ಪ್ರಶಂಸಿಸಲಾಗುವುದು. ನಿರ್ಲಕ್ಷ್ಯ ತೋರಿದವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು’ ಎಂದು ಕಂದಾಯ ಸಚಿವರು ಎಚ್ಚರಿಕೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಮನಗೂಳಿ, ಗೃಹ ಸಚಿವ ಎಂ.ಬಿ.ಪಾಟೀಲ, ಜಿಲ್ಲಾಧಿಕಾರಿ ಎಂ.ಕನಗವಲ್ಲಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಕಾಸ್ ಕಿಶೋರ್ ಸುರಳಕರ್ ಪತ್ರಿಕಾಗೋಷ್ಠಿಯಲ್ಲಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !