ಐಟಿ ಸಾಧನೆ: ನಿಯೋಗ ಮೆಚ್ಚುಗೆ

7

ಐಟಿ ಸಾಧನೆ: ನಿಯೋಗ ಮೆಚ್ಚುಗೆ

Published:
Updated:

ಬೆಂಗಳೂರು: ಮಲೇಷ್ಯಾದ ಅನ್ವರ್ ಬಿನ್ ಇಬ್ರಾಹಿಂ ನೇತೃತ್ವದ ಸಂಸದರ ನಿಯೋಗವು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶುಕ್ರವಾರ ಭೇಟಿ ಮಾಡಿ ವಿವಿಧ ವಲಯಗಳಲ್ಲಿ ಹೂಡಿಕೆ ಕುರಿತು ಚರ್ಚೆ ನಡೆಸಿತು.

ಈ ವೇಳೆ ಇಬ್ರಾಹಿಂ ಮಾತನಾಡಿ, ‘ಆರ್ಥಿಕ ಬೆಳವಣಿಗೆಯಲ್ಲಿ ಮಾಹಿತಿ ತಂತ್ರಜ್ಞಾನ(ಐಟಿ) ಮಹತ್ತರ ಪಾತ್ರ ವಹಿಸುತ್ತಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ಅದರಲ್ಲೂ ಬೆಂಗಳೂರಿನ ಸಾಧನೆ ಅತ್ಯುನ್ನತ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ನಾನು ನಿಮ್ಮಂತೆಯೇ ರೈತರು ಹಾಗೂ ಜನಸಾಮಾನ್ಯರ ಅಭಿವೃದ್ಧಿ ಪರ ನಿಲುವು ಹೊಂದಿದ್ದೇನೆ. ಆದರೆ, ದೇಶದ ಆರ್ಥಿಕ ಅಭಿವೃದ್ಧಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವುದು ಅನಿವಾರ್ಯ. ರಾಜ್ಯದ ಮೂಲಸೌಕರ್ಯ ವಲಯದಲ್ಲಿ ಮಲೇಷ್ಯಾವು ಹೂಡಿಕೆ ಮಾಡಲು ಆಸಕ್ತಿ ಹೊಂದಿದೆ’ ಎಂದೂ ಅವರು ತಿಳಿಸಿದರು.

ನವೆಂಬರ್‌ನಲ್ಲಿ ನಡೆಯುವ ಟೆಕ್‌ ಸಮ್ಮಿಟ್‌ನಲ್ಲಿ ಪಾಲ್ಗೊಳ್ಳುವಂತೆ ಇಬ್ರಾಹಿಂ ಅವರನ್ನು ಕುಮಾರಸ್ವಾಮಿ ಆಹ್ವಾನಿಸಿದರು.ಬೆಂಗಳೂರಿನ ಎಲಿ ವೇಟೆಡ್ ಕಾರಿಡಾರ್ ಯೋಜನೆಯಲ್ಲಿ ಹೂಡಿಕೆ ಮಾಡಲು ಆಸಕ್ತಿ ಇರುವ ಕಂಪನಿಗಳನ್ನು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಆಹ್ವಾನಿಸಿದರು.

‘ನಮ್ಮ ರಾಜ್ಯದಲ್ಲಿ ಮೊದಲ ಬಾರಿಗೆ ನವೋದ್ಯಮ ನೀತಿ ಜಾರಿಗೆ ತಂದಿದೆ. ಜತೆಗೆ, ಮಾಹಿತಿ ತಂತ್ರಜ್ಞಾನ ನೀತಿಯನ್ನು ರೂಪಿಸಲಾಗಿದ್ದು, ತಂತ್ರಜ್ಞಾನದಲ್ಲಿ ಬೆಂಗಳೂರು‌ ಮೊದಲ ಸ್ಥಾನದಲ್ಲಿದೆ. ಪ್ರತಿವರ್ಷ 50 ಸಾವಿರಕ್ಕೂ ಹೆಚ್ಚು ಎಂಜಿನಿಯರ್‌ ಪದವೀಧರರು ಉತ್ತೀರ್ಣರಾಗಿ ಉದ್ಯೋಗ ಪಡೆದುಕೊಳ್ಳುತ್ತಿದ್ದಾರೆ’ ಎಂದರು.

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !