ಗುತ್ತಿಗೆದಾರರ ಮನೆಗಳ ಮೇಲೆ ಐ.ಟಿ ದಾಳಿ: ಪಿಐಎಲ್‌ ವಜಾ

ಭಾನುವಾರ, ಮೇ 26, 2019
28 °C

ಗುತ್ತಿಗೆದಾರರ ಮನೆಗಳ ಮೇಲೆ ಐ.ಟಿ ದಾಳಿ: ಪಿಐಎಲ್‌ ವಜಾ

Published:
Updated:

ಬೆಂಗಳೂರು: ‘ಗುತ್ತಿಗೆದಾರರ ಮನೆಗಳ ಮೇಲೆ ಆದಾಯ ತೆರಿಗೆ (ಐ.ಟಿ) ಇಲಾಖೆ ನಡೆಸಿದ್ದ ದಾಳಿ ಖಂಡಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಇತರರು ಐ.ಟಿ ಕಚೇರಿ ಎದುರು ಪ್ರತಿಭಟನೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್‌ಐಅರ್ ದಾಖಲಿಸಲು ಡಿಜಿಪಿಗೆ ನಿರ್ದೇಶನ ನೀಡಬೇಕು’ ಎಂದು ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹೈಕೋರ್ಟ್ ವಜಾ ಮಾಡಿದೆ.

ಈ ಸಂಬಂಧ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಚೇಳೂರು ಗ್ರಾಮದ ಕೃಷಿಕ ಎ. ಮಲ್ಲಿಕಾರ್ಜುನ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ಇದನ್ನು ಪಿಐಎಲ್ ಹೆಸರಿನಲ್ಲಿ ಮಾನ್ಯ ಮಾಡಲಾಗದು. ಆದ್ದರಿಂದ, ಕಾನೂನಿನಲ್ಲಿ ಲಭ್ಯವಿರುವ ಅನ್ಯ ಅವಕಾಶಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಿ’ ಎಂದು ಅರ್ಜಿದಾರರಿಗೆ ಸೂಚಿಸಿ ಅರ್ಜಿ ವಜಾ ಮಾಡಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !