ಬಾಲ್ಯವಿವಾಹ ತಡೆ ಕಾಯ್ದೆ ಜಾಗೃತಿ 3ರಿಂದ

7

ಬಾಲ್ಯವಿವಾಹ ತಡೆ ಕಾಯ್ದೆ ಜಾಗೃತಿ 3ರಿಂದ

Published:
Updated:

ವಿಜಯಪುರ: ಮಕ್ಕಳ ರಕ್ಷಣಾ ಕಾನೂನು, ಬಾಲ್ಯವಿವಾಹ ತಡೆ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಡಿ.3ರಿಂದ 6ರವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ವನಿತಾ ತೊರವಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕ, ವರ್ಲ್ಡ್‌ ವಿಜನ್‌ ವತಿಯಿಂದ ಕಾರ್ಯಕ್ರಮ ನಡೆಯಲಿವೆ ಎಂದು ಶನಿವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿ.3 ರಂದು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ‘ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕಾನೂನುಗಳ ಕುರಿತು ಕಾರ್ಯಾಗಾರ ನಡೆಯಲಿದೆ. 4 ರಂದು ಮಾಧ್ಯಮ ಪ್ರತಿನಿಧಿಗಳಿಗೆ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಕಾನೂನು ಕುರಿತು ಕಾರ್ಯಾಗಾರ ಹಾಗೂ ಸಂಜೆ 5ಕ್ಕೆ ಬಾಲ್ಯ ವಿವಾಹ ತಡೆ ಕುರಿತು ಮಾಹಿತಿ ಬಿತ್ತರಿಸುವ ‘ಸಂದಿಗ್ಧ’ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಇದಕ್ಕೂ ಮೊದಲು ಸಿದ್ಧೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದವರೆಗೆ ಚಲನಚಿತ್ರ ತಂಡ ಮತ್ತು ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಲಿದೆ ಎಂದು ತಿಳಿಸಿದರು.

ಡಿ.3ರಿಂದ 6ರವರೆಗೆ ಬೆಳಿಗ್ಗೆ 9.30ರಿಂದ 11ಗಂಟೆಯವರೆಗೆ ಜಿಲ್ಲೆಯ 18 ಚಿತ್ರಮಂದಿರಗಳಲ್ಲಿ ಸಂದಿಗ್ಧ ಚಲನಚಿತ್ರ ಪ್ರದರ್ಶನಗೊಳ್ಳಲಿದೆ. ವಿವಿಧ ಶಾಲೆಗಳ ಅಂದಾಜು 60 ಸಾವಿರ ಮಕ್ಕಳು ಚಿತ್ರ ವೀಕ್ಷಿಸಲಿದ್ದಾರೆ. 5ರಂದು ಬೆಳಿಗ್ಗೆ 11ಕ್ಕೆ ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಬಾಲ್ಯ ವಿವಾಹ ಹಾಗೂ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸ್ಲಂ ವಿದ್ಯಾರ್ಥಿಗಳೊಂದಿಗೆ ಸಂವಾದ ಏರ್ಪಡಿಸಲಾಗಿದೆ ಎಂದು ವಿವರಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಂ.ಸಿಂಧೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಅಶೋಕ ಕೆಲವಡೆ, ನಿರ್ಮಲಾ ಸುರಪುರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !