6ಕ್ಕೆ ‘ಪ್ರಜಾವಾಣಿ’ ಜನಸ್ಪಂದನ

7

6ಕ್ಕೆ ‘ಪ್ರಜಾವಾಣಿ’ ಜನಸ್ಪಂದನ

Published:
Updated:

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನಿವಾಸಿಗಳೇ, ನಿಮ್ಮ ಬಡಾವಣೆಯಲ್ಲಿ ಬೀದಿ ದೀಪಗಳು ಬೆಳಗುವುದಿಲ್ಲವೇ? ನೀರು ಪೂರೈಕೆ ಅಸಮರ್ಪಕವಾಗಿದೆಯೇ? ಕಸ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲವೇ?

ಹಾಗಾದರೆ, ಅಕ್ಟೋಬರ್‌ 6ರಂದು ಬೆಳಿಗ್ಗೆ ಮತ್ತಿಕೆರೆಯ ಜೆ.ಪಿ.ಪಾರ್ಕ್‌ಗೆ ಬನ್ನಿ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ನಿಮ್ಮ ದೂರುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು.

ಕ್ಷೇತ್ರದ ಶಾಸಕರು, ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶ ಬಳಸಿಕೊಳ್ಳಬಹುದು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅ.6ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ಕುಂದು ಕೊರತೆಗಳನ್ನು ಮುಂಚಿತವಾಗಿ janaspandana@printersmysore.co.inಗೆ ಇ–ಮೇಲ್‌ ಕೂಡ ಮಾಡಬಹುದು. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !