ಅರ್ಥಪೂರ್ಣ ಆಚರಣೆಗೆ ನಿರ್ಧಾರ

7
ವೇಮನ, ಚೌಡಯ್ಯ, ಸಿದ್ದರಾಮೇಶ್ವರರ ಜಯಂತಿ ಪೂರ್ವ ಸಿದ್ಧತಾ ಸಭೆ

ಅರ್ಥಪೂರ್ಣ ಆಚರಣೆಗೆ ನಿರ್ಧಾರ

Published:
Updated:
Prajavani

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಹಾಗೂ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಆಚರಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಪ್ರಸನ್ನ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ, ಜ.19ರಂದು ವೇಮನ ಜಯಂತಿ, 21ರಂದು ಅಂಬಿಗರ ಚೌಡಯ್ಯ ಜಯಂತಿ ಹಾಗೂ 23ರಂದು ಸಿದ್ಧರಾಮೇಶ್ವರರ ಜಯಂತಿ ಆಚರಿಸಲು ನಿರ್ಣಯ ಕೈಗೊಳ್ಳಲಾಯಿತು.

ಎಲ್ಲ ಮಹನೀಯರ ಜಯಂತಿ ದಿನ ವಿವಿಧ ಕಲಾ ತಂಡಗಳೊಂದಿಗೆ ಪ್ರಮುಖ ಸ್ಥಳಗಳಿಂದ ಸಾರ್ವಜನಿಕ ಸಮಾರಂಭ ನಡೆಯುವ ಸ್ಥಳದವರೆಗೆ ಆಯಾ ಮಹಾಪುರುಷರ ಭಾವಚಿತ್ರ ಮೆರವಣಿಗೆ, ಶಿಷ್ಟಾಚಾರದಂತೆ ಅತಿಥಿ ಗಣ್ಯರಿಗೆ ಆಹ್ವಾನ, ಮೆರವಣಿಗೆ ಮಾರ್ಗ ಸ್ವಚ್ಛಗೊಳಿಸುವುದು, ಕುಡಿಯುವ ನೀರಿನ ವ್ಯವಸ್ಥೆ, ವೃತ್ತ ಮತ್ತು ವೇದಿಕೆ ಅಲಂಕಾರ ಕುರಿತಂತೆ ವ್ಯವಸ್ಥಿತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗೆ ಸೂಚನೆ ನೀಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಎಚ್.ಬಿ, ಮುಖಂಡರಾದ ಸಾಹೇಬಗೌಡ ಬಿರಾದಾರ, ಶಿವಾನಂದ ಭುಯ್ಯಾರ, ಭರತ ಕೋಳಿ, ವಿದ್ಯಾವತಿ ಅಂಕಲಗಿ, ವಿ.ಜಿ.ನಾಗಠಾಣ, ಶರಣು ಸಬರದ, ಸೋಮನಗೌಡ ಕಲ್ಲೂರ, ಎಚ್.ಆರ್.ಮಾಚಪ್ಪನವರ, ಡಾ.ಕರಿಗೌಡರ, ಡಾ.ಕಂಠೀರವ ಕುಲ್ಲೊಳ್ಳಿ ಸಭೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !