ಜೆಡಿಎಸ್‌ ಕಟ್ಟಡ ನಿರ್ಮಾಣ ವೇಳೆಯ ದುರಂತ ಪ್ರಕರಣ: ನೋಟಿಸ್‌ ಜಾರಿಗೆ ಆದೇಶ

ಮಂಗಳವಾರ, ಏಪ್ರಿಲ್ 23, 2019
31 °C

ಜೆಡಿಎಸ್‌ ಕಟ್ಟಡ ನಿರ್ಮಾಣ ವೇಳೆಯ ದುರಂತ ಪ್ರಕರಣ: ನೋಟಿಸ್‌ ಜಾರಿಗೆ ಆದೇಶ

Published:
Updated:

ಬೆಂಗಳೂರು: ‘ಜೆಡಿಎಸ್ ಪಕ್ಷದ ಕಚೇರಿ ಕಟ್ಟಡದ ನಿರ್ಮಾಣ ಸಂದರ್ಭದಲ್ಲಿ ಕೃಷ್ಣಪ್ಪ ಎಂಬ ಕಾರ್ಮಿಕನ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಹಾಗೂ ಮೃತನ ಕುಟುಂಬದವರಿಗೆ ಆರ್ಥಿಕ ಪರಿಹಾರ ನೀಡಲು ಆದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೊಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಮೃತ ಕೃಷ್ಣಪ್ಪ ಅವರ ಪತ್ನಿ ಶಾರದಮ್ಮ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಶ್ರೀರಾಮಪುರ ಪೊಲೀಸ್ ಠಾಣಾಧಿಕಾರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಪ್ರಕರಣವೇನು?: ‘ನನ್ನ ಪತಿಯ ಸಾವಿಗೆ ಪೊಲೀಸರು ನಿಖರ ಕಾರಣ ತಿಳಿಸಿಲ್ಲ ಹಾಗೂ ಪ್ರಕರಣದ ಕುರಿತು ಸೂಕ್ತ ರೀತಿ ತನಿಖೆ ನಡೆಸಿಲ್ಲ’ ಎಂಬುದು ಅರ್ಜಿದಾರ ಶಾರದಮ್ಮ ಅವರ ಆಕ್ಷೇಪ.

‘ನನಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಪತಿಯ ಸಾವಿನಿಂದ ಜೀವನ ನಡೆಸುವುದು ಕಷ್ಟವಾಗಿದೆ. ಹೀಗಾಗಿ ಪ್ರಕರಣವನ್ನು ಮರುತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದ್ದಾರೆ.

‘2017ರ ಮೇ 3ರಂದು ಜೆಡಿಎಸ್ ಕಚೇರಿ ಕಟ್ಟಡದ ನಿರ್ಮಾಣಕ್ಕಾಗಿ ಮಣ್ಣು ಅಗೆಯುತ್ತಿದ್ದಾಗ ನನ್ನ ಪತಿ ಕೃಷ್ಣಪ್ಪ ಮೃತಪಟ್ಟಿದ್ದರು. ಇದು ಅಸಹಜ ಸಾವು ಪ್ರಕರಣ ಎಂದು ಶ್ರೀರಾಮಪುರ ಠಾಣೆ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಅನ್ನು ವಿಚಾರಣಾ ನ್ಯಾಯಾಲಯ ಒಪ್ಪಿಕೊಂಡಿದೆ. ಹೀಗಾಗಿ ಮರು ತನಿಖೆ ಅಗತ್ಯವಿದೆ’ ಎಂದು ಅರ್ಜಿದಾರರು ಹೇಳಿದ್ದಾರೆ.

ಸುರೇಶ್‌ ವ್ಯಂಗ್ಯ
ಚನ್ನಪಟ್ಟಣ:
‘ಜೆಡಿಎಸ್‌ ಸೋಲಿಸಲು ಶಿವರಾಮೇಗೌಡ ಅವರಂಥ ಆ ಪಕ್ಷದ ನಾಯಕರೇ ಸಾಕು’ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ವ್ಯಂಗ್ಯವಾಡಿದರು.

ಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !