ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಜಾರ್ಜ್ ಭೇಟಿ

ದಾಬಸ್ ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೊದಲಿಗೆ ಇ-ಪರಿಸರ ಪ್ರೈವೇಟ್ ಲಿಮಿಟೆಡ್ಗೆ ಭೇಟಿ ನೀಡಿದ ಅವರು, ನಗರ ಇ-ತ್ಯಾಜ್ಯವನ್ನು ವೈಜ್ಞಾನಿಕ ಮಾದರಿಯಲ್ಲಿ ಮತ್ತು ಕಡಿಮೆ ಖರ್ಚಿನಲ್ಲಿ ಬೇರ್ಪಡಿಸುತ್ತಿರುವುದನ್ನು ವೀಕ್ಷಿಸಿದರು. ನಂತರ ತ್ರಿವೇಣಿ ಎಂಜಿನಿಯರಿಂಗ್ ಲಿಮಿಟೆಡ್ನ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿದರು. ಪೊಲೀಸ್ ಪಹರೆಯನ್ನು ಹೆಚ್ಚಿಸಬೇಕು ಎಂದು ಆಡಳಿತ ಮಂಡಳಿಯವರು ಮನವಿ ಮಾಡಿಕೊಂಡರು.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆಗೆ ಚರ್ಚಿಸುತ್ತೇನೆ ಎಂದು ಜಾರ್ಜ್ ಭರವಸೆ ನೀಡಿದರು. ಕಲ್ಪತರು ಬ್ರೆವರೀಸ್ ಆ್ಯಂಡ್ ಡಿಸ್ಟಿಲರಿಯಲ್ಲಿ ಕೈಗಾರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
‘ಜಿಂದಾಲ್ಗೆ ಭೂಮಿ ಕೊಟ್ಟಿರುವ ಸಿಟ್ಟಿಗೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. 2006ರಲ್ಲೇ ಅಂದಿನ ಸರ್ಕಾರ ಗುತ್ತಿಗೆ ಹಾಗೂ ಮಾರಾಟ ಒಪ್ಪಂದ ಮಾಡಿಕೊಂಡಿತ್ತು. ಈ ಸಂಬಂಧ ಅವರು ಆಕ್ಷೇಪವನ್ನೂ ವ್ಯಕ್ತಪಡಿಸಿದ್ದರು. ಭೂಮಿ ಕೊಡುವ ವಿಷಯದ ಸಂಬಂಧ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಿಂಗ್ ಅವರಿಗೆ ಸಮಸ್ಯೆ ಇದ್ದರೆ ಅಲ್ಲೇ ಬಗೆಹರಿಸಿಕೊಳ್ಳಬಹುದಿತ್ತು. ರಾಜೀನಾಮೆ ಕೊಡುವ ವಿಚಾರ ಸರಿಯಲ್ಲ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.