ಅನುಮಾನಾಸ್ಪದ ವಸ್ತು ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

7

ಅನುಮಾನಾಸ್ಪದ ವಸ್ತು ಸ್ಫೋಟ: ನಾಲ್ವರಿಗೆ ಗಂಭೀರ ಗಾಯ

Published:
Updated:

ಕಲಬುರ್ಗಿ: ಎಂಎಸ್ ಕೆಮಿಲ್ ಪ್ರದೇಶದ ಹುಸೇನಿ ಗಾರ್ಡನ್ ನಲ್ಲಿರುವ ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಕ್ಬರ್ (37), ಶನ್ನು (35) ಮಕ್ಕಳಾದ ಮಹ್ಮದ್ ಯಾಸಿನ್ (13) ಹಾಗೂ ಸಾನಿಯಾ (10) ಗಾಯಗೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೇ 80ರಷ್ಟು ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

'ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸಿಲಿಂಡರ್ ಸ್ಫೋಟದಿಂದ ಅವಘಡ ಸಂಭವಿಸಿರುವ ಶಂಕೆ ಇದೆ' ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !