ಕನಕದಾಸರ ಸಂದೇಶಗಳನ್ನು ನಾವೆಲ್ಲ ಪಾಲಿಸಬೇಕು: ಕೆ.ನರಸಿಂಹಮೂರ್ತಿ ಸಲಹೆ

7
ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ನಡೆದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ

ಕನಕದಾಸರ ಸಂದೇಶಗಳನ್ನು ನಾವೆಲ್ಲ ಪಾಲಿಸಬೇಕು: ಕೆ.ನರಸಿಂಹಮೂರ್ತಿ ಸಲಹೆ

Published:
Updated:
Prajavani

ಚಿಕ್ಕಬಳ್ಳಾಪುರ: ‘ಕನಕದಾಸರ ವ್ಯಕ್ತಿತ್ವ ಆದರ್ಶ ಪ್ರಾಯವಾದದ್ದು. ಅವರ ಜೀವನ ಮತ್ತು ಸಂದೇಶಗಳನ್ನು ನಾವೆಲ್ಲರೂ ಪಾಲಿಸಬೇಕು’ ಎಂದು ತಹಶೀಲ್ದಾರ್ ಕೆ.ನರಸಿಂಹಮೂರ್ತಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ತಾಲ್ಲೂಕು ಕಚೇರಿಯಲ್ಲಿ ಗುರುವಾರ ಸಾಂಕೇತಿಕವಾಗಿ ಆಯೋಜಿಸಿದ್ದ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕನಕದಾಸರ ಭಕ್ತಿ, ಆಚಾರ, ವಿಚಾರ, ಕೀರ್ತನೆಗಳನ್ನು ಕೇವಲ ಓದಿಗೆ ಸೀಮಿತಗೊಳಿಸಬಾರದು. ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ಅವುಗಳಿಗೆ ಅರ್ಥ ಬರುತ್ತದೆ. ಕನಕದಾಸರು ತಮ್ಮ ಕೀರ್ತನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಜತೆಗೆ ಅನೇಕ ಆದರ್ಶಗಳನ್ನು ಸಮಾಜಕ್ಕೆ ತೋರಿಸಿಕೊಟ್ಟರು. ಕನಕದಾಸರ ಸಾಹಿತ್ಯವನ್ನು ಹೊರತುಪಡಿಸಿ ಕರ್ನಾಟಕದ ಭಕ್ತಿ ಸಾಹಿತ್ಯದ ಪರಂಪರೆ ಪೂರ್ತಿಗೊಳಿಸಲು ಸಾಧ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಅಕ್ಕಮಹಾದೇವಿ, ಬಸವಣ್ಣ, ಕನಕದಾಸರ ವಚನಗಳು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಚನ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ’ ಎಂದು ತಿಳಿಸಿದರು.

ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್‌.ವೆಂಕಟಾಚಲಪತಿ, ವಾರ್ತಾ ಇಲಾಖೆ ಉಪ ನಿರ್ದೇಶಕ ಜುಂಜಣ್ಣ, ಕುರುಬರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಲಕ್ಷ್ಮಯ್ಯ, ಉಪಾಧ್ಯಕ್ಷ ಜಯರಾಂ, ಕಾರ್ಯದರ್ಶಿ ಆನಂದ್, ಮುಖಂಡರಾದ ಎನ್.ಆರ್.ರಮೇಶ್, ಪ್ರಕಾಶ್, ಸಿದ್ದರಾಮಣ್ಣ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !