ಹೆಸರಘಟ್ಟ: ‘ಶಿವರಾಮ ಕಾರಂತ ಬಡಾವಣೆಗೆ ರೈತರು ಭೂಮಿ ಬಿಟ್ಟುಕೊಡಲು ಒಪ್ಪಿಲ್ಲ. ಪರಿಹಾರ ಹಣವನ್ನೂ ಕೇಳಿಲ್ಲ. ಆದರೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಅಧಿಕಾರಿಗಳು ಮಾಧ್ಯಮಗಳಿಗೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ’ಎಂದು ಬಡಾವಣೆ ಸಂತ್ರಸ್ತರ ಸಂಘದ ಅಧ್ಯಕ್ಷ ಬಿ.ಆರ್.ನಂಜುಂಡಪ್ಪ ಸ್ಪಷ್ಟಪಡಿಸಿದರು.

ದೊಡ್ಡಬ್ಯಾಲಕೆರೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಂಡಿದ್ದೆವು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಚರ್ಚೆ ಮಾಡಿ, ಸಮಸ್ಯೆಗೆ ಪರಿಹಾರ ಒದಗಿಸುವ ಭರವಸೆಯನ್ನು ಅವರು ನೀಡಿದ್ದರು. ಹೀಗಾಗಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡುವುದನ್ನು ಕೈ ಬಿಟ್ಟಿದ್ದೆವು’ ಎಂದು ಅವರು ತಿಳಿಸಿದರು.

‘ಮುಖ್ಯಮಂತ್ರಿ ಭೇಟಿಗೆ ನಮಗೆ ಸಮಯ ನೀಡಿಲ್ಲ. ಆದರೆ, ಬಿಡಿಎ ಅಧಿಕಾರಿಗಳು ಸುಳ್ಳು ಹೇಳುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಘದ ಉಪಾಧ್ಯಕ್ಷ ರವೀಶ್, ‘ಅಧಿಕಾರಿಗಳು ಸುಳ್ಳು ಹೇಳು ವುದನ್ನು ನಿಲ್ಲಿಸದಿದ್ದರೆ ಬಿಡಿಎ ಎದುರು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.