ಕರಾಟೆ: 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

7
ಕರ್ನಾಟಕ ರಾಜ್ಯೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ

ಕರಾಟೆ: 7 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Published:
Updated:
Deccan Herald

ಕೊಳ್ಳೇಗಾಲ: ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ವಿವಿಧ ಶಾಲೆಗಳ ಏಳು ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಸಂತಕುಮಾರಿ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶಿಲ್ಪಾ, ಅಂಜುಮಾ, ನೇಹಾ, ರತ್ನವಲ್ಲಿ, ರಂಜಿತಾ, ಬಿ.ಎಂ.ಎಚ್. ಶಾಲೆಯ ಸೌಭಾಗ್ಯಲಕ್ಷ್ಮಿ ಹಾಗೂ ಎಸ್.ಡಿ.ಎ ಶಾಲೆಯ ತನುಜಾ ಪ್ರಥಮ ಸ್ಥಾನ ಗಳಿಸಿದ್ದರು.

ನಗರದ ಪೊಲೀಸ್‌ ಠಾಣೆಯ ಪಿಎಸ್‍ಐ ವೀಣಾ ನಾಯಕ್ ಅವರು ವಿದ್ಯಾರ್ಥಿಗಳಿಗೆ ವೈಯುಕ್ತಿಕ ಬಹುಮಾನ ನೀಡುವ ಗೌರವಿಸಿದ್ದರು.

ವಸಂತಕುಮಾರಿ ಕಾಲೇಜಿನ ಉಪಪ್ರಾಂಶುಪಾಲ ಮಹದೇವಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಉಮಾಶಂಕರ್ ಹಾಗೂ ಕರಾಟೆ ಶಿಕ್ಷಕ ನಂಜುಂಡಸ್ವಾಮಿ ವಿದ್ಯಾರ್ಥಿಗಳಿಗೆ ಶುಭಕೋರಿದ್ದಾರೆ.

ನಗರದ ನ್ಯಾಷನಲ್‌ ಮೈದಾನದಲ್ಲಿ ನ.1ರಂದು ನಡೆದಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !