ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ–2023ಕ್ಕೆ ಇಂದಿನಿಂದ (ಏಪ್ರಿಲ್ 13) ಅಧಿಕೃತ ಚುನಾವಣಾ ಪ್ರಕ್ರಿಯೆಗಳು ಪ್ರಾರಂಭವಾಗಲಿವೆ.

ಗುರುವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದ್ದು ಒಟ್ಟು ಏಳು ದಿನ ಅವಕಾಶ ಇರುತ್ತದೆ. ಏ.20 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 24 ಕಡೆಯ ದಿನವಾಗಿದೆ.

ಮೇ 10 ರಂದು ಬುಧವಾರ ಒಂದೇ ಹಂತದಲ್ಲಿ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದಲ್ಲಿ ಒಟ್ಟು 5.24 ಕೋಟಿ ಮತದಾರರಿದ್ದು ಇದರಲ್ಲಿ ಪುರುಷರು 2.63 ಕೋಟಿ ಹಾಗೂ ಮಹಿಳೆಯರು 2.60 ಕೋಟಿ ಇದ್ದಾರೆ.

ಈಗಾಗಲೇ ಬಿಜೆಪಿ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ 166 ಹಾಗೂ ಜೆಡಿಎಸ್ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಬಿಜೆಪಿ ತೊರೆಯುವ ನಿರ್ಧಾರ ತಿಳಿಸಿದ ಲಕ್ಷ್ಮಣ ಸವದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.