ರಾಮನಗರದಲ್ಲಿ ವಸತಿ ಕಾಲೇಜು

7
ಪ್ರಥಮ ದರ್ಜೆ ಕಾಲೇಜಿಗೆ ಅನುಮತಿ

ರಾಮನಗರದಲ್ಲಿ ವಸತಿ ಕಾಲೇಜು

Published:
Updated:

ಬೆಂಗಳೂರು: ರಾಮನಗರದಲ್ಲಿ ₹16.85 ಕೋಟಿ ವೆಚ್ಚದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಅಲ್ಲದೆ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗಾನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ 26 ಕೆರೆಗಳಿಗೆ ₹ 47 ಕೋಟಿ  ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಭಾರೀ ಮಳೆಯಾಗಿರುವುದರಿಂದ ಪ್ರಕೃತಿ ವಿಕೋಪ ನಿಧಿಯಲ್ಲಿ ಜಿಲ್ಲಾಡಳಿತ ಗಳಲ್ಲಿ ₹ 160 ಕೋಟಿ ಅನುದಾನ ಲಭ್ಯವಿದೆ. ಇದನ್ನು ಪರಿಹಾರ ಕಾರ್ಯಕ್ಕೆ ಬಳಸಲು ಕಂದಾಯ ಸಚಿವರು ನಿರ್ದೇಶನ ನೀಡಿದ್ದಾರೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !