ಗಂಗಾವತಿ: ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಕರಿಯಣ್ಣ ಸಂಗಟಿ ಭಾನುವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದು ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಗಂಗಾವತಿ ತಾಲ್ಲೂಕಿನ ಮರಳಿ ಗ್ರಾಮದಲ್ಲಿ ಬಳ್ಳಾರಿ ವಿಭಾಗ ಮಟ್ಟದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಆಯೋಜನೆಯಾಗಿದ್ದ ರಾಯಲ್ ರಿಚ್ ಕೌಂಟಿ ಹೋಟೆಲ್ ನಲ್ಲಿ ಕರಿಯಣ್ಣ ಸಂಗಟಿ ಭೇಟಿಯಾದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಲುವಾಗಿ ಸಿ.ವಿ. ಚಂದ್ರಶೇಖರ ಹಾಗೂ ಸಂಸದ ಸಂಗಣ್ಣ ಕರಡಿ ಕುಟುಂಬದವರ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದೆ. ಕರಿಯಣ್ಣ ಕಾಂಗ್ರೆಸ್ ನಲ್ಲಿದ್ದರೂ ಬಿಜೆಪಿಯ ಸಂಗಣ್ಣ ಅವರಿಗೆ ಮೊದಲಿನಿಂದಲೂ ಬೆಂಬಲ ನೀಡಿಕೊಂಡು ಬಂದಿದ್ದಾರೆ. ಹೀಗಾಗಿ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.